ಪ್ರಧಾನ ಸುದ್ದಿ

ರಾಯಚೂರು ಡಿಸಿ ನಿಯೋಜನೆ

Published On :

ಬೆಂಗಳೂರು: ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಮತ್ತು ಸತ್ತವರ ಕುಟುಂಬದವರಿಗೆ ನೆರವಾಗಲು ರಾಯಚೂರು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ್ ಅವರನ್ನು ಸರ್ಕಾರ ನಿಯೋಜಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಅವರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ದುರಂತದ ಬಗ್ಗೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.



ತನಿಖೆಗೆ ಆದೇಶ

ಮೆಹಬೂಬ್ನಗರ ದುರಂತದ ಬಗ್ಗೆ ತನಿಖೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ನಲ್ಲಾರಿ ಕಿರಣ್ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಮೆಹಬೂಬ್ನಗರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಗಾಯಾಳುಗಳಿಗೆ ಮತ್ತು ಅಸುನೀಗಿದ ಪ್ರಯಾಣಿಕರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ತೆಲುಗುದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಸೇರಿದಂತೆ ಪ್ರಮುಖರು ದುರಂತಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.


ಪ್ರಧಾನಿ ಶೋಕ
ಮೆಹಬೂಬ್ನಗರದಲ್ಲಿ ಸಂಭವಿಸಿದ ಬಸ್ ದುರಂತಕ್ಕೆ ಪ್ರಧಾನಿ ಡಾ.ಮನಮೋಹನ್ ಸಿಂಗ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ ಹಾಗೂ ಕೊನೆಯುಸಿರೆಳೆದ ಪ್ರಯಾಣಿಕರ ಕುಟುಂಬ ವರ್ಗಕ್ಕೆ ಸಾಂತ್ವನವನ್ನೂ ಅವರು ತಿಳಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.