ಪ್ರಧಾನ ಸುದ್ದಿ

ತಡೆಯಾಜ್ಞೆ ಮಧ್ಯೆಯೂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ!

Published On :

ಕುಷ್ಟಗಿ/ದೇವದುರ್ಗ/ರಾಯಚೂರು: ಮೀಸಲಾತಿ ವಿವಾದ ಕುರಿತು ನಗರ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದರೂ ಕುಷ್ಟಗಿ, ದೇವದುರ್ಗ ಪುರಸಭೆ ಹಾಗೂ ರಾಯಚೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗಿದೆ. 23 ಸದಸ್ಯ ಬಲದ ಕುಷ್ಟಗಿ ಪುರಸಭೆ ಅಧ್ಯಕ್ಷ (ಪ.ಜಾತಿ) ಸ್ಥಾನಕ್ಕೆ ಕಾಂಗ್ರೆಸ್‌ನ ಮಂಜುಳಾ ನಾಗರಾಳ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಎಸ್‌ನ (ಸಾಮಾನ್ಯ ಮಹಿಳೆ) ರೇಣುಕಾ ಡೊಳ್ಳಿನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಚುನಾವಣಾಧಿಕಾರಿ ತಹಸೀಲ್ದಾರ್ ವೀರೇಶ ಬಿರಾದಾರ ಇಬ್ಬರನ್ನೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿದರು. 23 ಸದಸ್ಯ ಬಲದ ದೇವದುರ್ಗ ಪುರಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದು ಅಧ್ಯಕ್ಷರಾಗಿ ಫಕೀರಸಾಬ್(ಫಕ್ರುದ್ದೀನ್) ಗೌರಂಪೇಟ್ ಹಾಗೂ ಉಪಾಧ್ಯಕ್ಷರಾಗಿ ನಾಗಪ್ಪ ಉಪ್ಪಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎರಡೂ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆಯನ್ನು ತಹಸೀಲ್ದಾರ್ ಹಾಗೂ ಚುನಾವಣಾಧಿಕಾರಿ ಬಸಲಿಂಗಪ್ಪ ನಾಯಿಕೋಡಿ ಘೋಷಿಸಿದ್ದಾರೆ. ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ 'ಎ'ಗೆ ಮೀಸಲಾಗಿತ್ತು. ಕಾಂಗ್ರೆಸ್ 14 ಸದಸ್ಯ ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿದ್ದರೂ ಅಧ್ಯಕ್ಷ ಸ್ಥಾನಕ್ಕೆ ಸರ್ಕಾರ ಪ್ರಕಟಿಸಿದ ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ 'ಕೈ' ತಪ್ಪಿದೆ. ಪಕ್ಷೇತರ ಸದಸ್ಯೆ ಮಹಾದೇವಮ್ಮ ತಾಯಣ್ಣ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಪದ್ಮಾ ಶ್ರೀನಿವಾಸ್ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.