ಪ್ರಧಾನ ಸುದ್ದಿ

ವಿಷಾಹಾರ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Published On :

ಲಿಂಗಸ್ಗೂರು: ತಾಲೂಕಿನ ಹಾಲಬಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ವಿಷಾಹಾರ ಸೇವನೆಯಿಂದ 60ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿದ್ದು, 15 ಮಕ್ಕಳನ್ನು ಲಿಂಗಸ್ಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ ಘಟನೆ ಶುಕ್ರವಾರ ಜರುಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ ಸುಮಾರು 253 ಮಕ್ಕಳ ದಾಖಲಾತಿಯಿದೆ. ಶುಕ್ರವಾರ 1- 4ನೇ ತರಗತಿಯ ಸುಮಾರು 100ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಅವರಲ್ಲಿ 60ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸುವಲ್ಲಿ ನಿರತರಾಗಿದ್ದರು. ಇದೇ ವೇಳೆ ಮಕ್ಕಳು ಅಸ್ವಸ್ಥಗೊಂಡ ಸುದ್ದಿ ತಿಳಿದು ಬಿಸಿಯೂಟ ನೀಡುವುದನ್ನು ಸ್ಥಗಿತಗೊಳಿಸಲಾಯಿತು.
ಸಾಂಬರ್‌ನಲ್ಲಿ ಹಲ್ಲಿ: ಕಾರಣ ತಿಳಿದಾಗ ಮಧ್ಯಾಹ್ನದ ಬಿಸಿಯೂಟ ಅಡುಗೆ ತಯಾರಿಸಿದ ಅಡುಗೆದಾರರ ನಿರ್ಲಕ್ಷ್ಯದಿಂದ ಸಾಂಬರ್ ಪಾತ್ರೆ ಮುಚ್ಚದೆ ಹಾಗೆಯೆ ಬಿಟ್ಟಿದ್ದಾರೆ. ಈ ಸಮಯದಲ್ಲಿ ಹಲ್ಲಿಯೊಂದು ಸಾಂಬರಿನಲ್ಲಿ ಬಿದ್ದಿರುವುದಾಗಿ ತಿಳಿದು ಬಂದಿತು. ಕೂಡಲೇ ಅಸ್ವಸ್ಥ ಮಕ್ಕಳನ್ನು ಲಿಂಗಸ್ಗೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆ ತರಲಾಯಿತು. ಆಸ್ಪತ್ರೆಗೆ ಕರೆ ತಂದ ಮಕ್ಕಳಲ್ಲಿ ಸುಮಾರು 45 ಮಕ್ಕಳು ಚಿಕಿತ್ಸೆ ಪಡೆದು ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಇನ್ನುಳಿದ ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆಂದು ಹಾಲಬಾವಿ ಮುಖ್ಯಗುರು ಹಾಜಿಬಾಬು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.