ಮೋದಿ ಅಂತಿಮ
2014ರ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗುವುದು...

-ಸೆ.19ರೊಳಗೆ ಅಂತಿಮ ನಿರ್ಧಾರ ಸಾಧ್ಯತೆ
ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ, ಸೆ.19ರೊಳಗೆ ಮೋದಿ ಅವರ ಕುರಿತ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಈ ಬಗ್ಗೆ ಆರ್ಎಸ್ಎಸ್ ನಾಯಕರು ಬಿಜೆಪಿ ನಾಯಕರ ಜೊತೆ ಸತತ ಮಾತುಕತೆ ನಡೆಸಿದ್ದು, ಅವರನ್ನು ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ. ಮೋದಿ ಅವರೇ ಅಂತಿಮ ಆಯ್ಕೆ ಎಂದೂ ಸ್ಪಷ್ಟಪಡಿಸಿರುವ ಆರ್ಎಸ್ಎಸ್, ಈ ವಿಚಾರದಲ್ಲಿ ನಮ್ಮ ನಿಲುವು ಬದಲಿಲ್ಲ ಎಂದು ಹೇಳಿದೆ ಎನ್ನಲಾಗಿದೆ. ಆದರೂ ಆಡ್ವಾಣಿ ಮತ್ತು ಸುಷ್ಮಾ ಸ್ವರಾಜ್ ಅವರ ಕೊಂಚ ವಿರೋಧವಿರುವುದರಿಂದ ಅಂತಿಮ ನಿರ್ಧಾರದ ಸ್ವತಂತ್ರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ಗೆ ಬಿಡಲಾಗಿದೆ.
ಇತ್ತೀಚೆಗಷ್ಟೇ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬಿಜೆಪಿ ನಾಯಕರಾದ ಎಲ್.ಕೆ. ಆಡ್ವಾಣಿ, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.
ಈ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆಗಳಾದ ಮೇಲೆ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬಹುದು ಎಂದು ಬಿಜೆಪಿ ನಾಯಕರು, ಆರ್ಎಸ್ಎಸ್ ನಾಯಕರಿಗೆ ಹೇಳಿದ್ದರು ಎನ್ನಲಾಗಿದೆ. ಆದರೆ ಇದಕ್ಕೆ ಒಪ್ಪದ ಆರ್ಎಸ್ಎಸ್ ಮೋದಿ ಅವರನ್ನು ಬಹುಬೇಗನೇ ಆಯ್ಕೆ ಮಾಡಿ ಎಂದಿತ್ತು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


