ಆನೆಗಳ ತೊಂದರೆ ನಿವಾರಣೆಗೆ 100 ಕೋಟಿ ವೆಚ್ಚ
ಬೆಂಗಳೂರು: ಆನೆಗಳು ಕಾಡು ಬಿಟ್ಟು ನಾಡಿಗೆ ಬಾರದಂತೆ ಕಂದಕ ನಿರ್ಮಿಸಲಾಗುತ್ತಿದ್ದು, ತಡೆಗೋಡೆ ಹಾಕಲಾಗುತ್ತಿದೆ. ಆದರೆ, ಕೆಲಸ ಪೂರ್ಣವಾಗಿಲ್ಲ. ಆನೆಗಳಿಂದ ಆಗುತ್ತಿರುವ ತೊಂದರೆ ನಿವಾರಣೆಗೆ 100 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳು ಸಿದ್ಧವಾಗಿವೆ. ಅದರಲ್ಲಿ 30 ಕೋಟಿ ಹಣ ಬಿಡುಗಡೆಯಾಗಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅರಣ್ಯ ಇಲಾಖೆಯಿಂದ ಮಲ್ಲೇಶ್ವರಲ್ಲಿರುವ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿ, ನಾಗರಹೊಳೆ ಅಭಯಾರಣ್ಯದ ಸುತ್ತ ಸುಮಾರು 600 ಚ.ಕಿ.ಮೀ.ವ್ಯಾಪ್ತಿಯಲ್ಲಿ ಆನೆಧಾಮ ನಿರ್ಮಿಸುವ ಯೋಜನೆಯೂ ಇದರಲ್ಲಿ ಸೇರಿದೆ ಎಂದರು. ಮತ್ತೊಂದೆಡೆ ನಾಗರಹೊಳೆಯ ಸುತ್ತ ನಿರ್ಮಿಸುತ್ತಿರುವ ತಡೆಗೋಡೆ ಕಾಮಗಾರಿ ಸುಮಾರು 21 ಚ.ಕಿ.ಮೀ ಮುಕ್ತಾಯವಾಗಿದ್ದು, ಇನ್ನೂ 41 ಚ.ಕಿ.ಮೀ ಬಾಕಿ ಇದೆ. ಹಾಸನ, ಬೆಂಗಳೂರು ಗ್ರಾಮಾಂತರ, ಮಡಿಕೇರಿ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಆನೆಗಳ ಕಾಟ ಹೆಚ್ಚಾಗಿದೆ ಎಂದು ಹೇಳಿದರು.
ನೆನೆಯುವುದು ಕರ್ತವ್ಯ: ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದಂತಹ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸಿ ಅವರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ. ವನ್ಯಜೀವಿಗಳನ್ನು ಸಂರಕ್ಷಿಸುವ ಕೆಲಸ ಮತ್ತಷ್ಟು ಆಗಲಿ ಹಾಗೂ ಅಂತಹ ಧೈರ್ಯಶಾಲಿಗಳು ಅರಣ್ಯ ಇಲಾಖೆಯಲ್ಲಿ ಸೇವೆಸಲ್ಲಿಸಲು ಮುಂದಾಗಲಿ ಎಂದರು. ಕರ್ತವ್ಯದ ವೇಳೆ ಸಾವನ್ನಪ್ಪಿ ಹುತಾತ್ಮರಾದ 38 ಸಿಬ್ಬಂದಿಗೆ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಕಾರ್ಯದರ್ಶಿ ಎನ್.ಶಿವಶೈಲಂ, ಅರಣ್ಯಪಡೆ ಮುಖ್ಯಸ್ಥ ದೀಪಕ್ ಶರ್ಮಾ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

