ಪ್ರಧಾನ ಸುದ್ದಿ

ದಿಲ್ಲಿ ಹತ್ಯಾಚಾರಿಗಳ ಜೀವಬರಹ ಇಂದು

ದಿಲ್ಲಿ ಹತ್ಯಾಚಾರಿಗಳ ಜೀವಬರಹ ಇಂದು
Published On :

ನವದೆಹಲಿ: ಡಿ.16ರಂದು ದೆಹಲಿಯಲ್ಲಿ 23 ವರ್ಷದ ಅರೆವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಸಾವಿಗೆ ಕಾರಣರಾದ ದುಷ್ಟರಿಗೆ ಶಿಕ್ಷೆ ಶುಕ್ರವಾರ ನಿರ್ಧಾರವಾಗಲಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಈ ಘಟನೆಯ ತೀರ್ಪು ಈಗಾಗಲೇ ಪ್ರಕಟವಾಗಿದೆ. ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಾಲ್ವರು ಅಪರಾಧಿಗಳ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದ್ದು, ಇಡೀ ದೇಶಕ್ಕೆ ದೇಶವೇ ಇದಕ್ಕಾಗಿ ಕಾದು ಕುಳಿತಿದೆ. ನಿರ್ಭಯಾಳ ಮೇಲೆ ಅತ್ಯಂತ ಕ್ರೂರವಾಗಿ ಅತ್ಯಾಚಾರವೆಸಗಿ ಅಟ್ಟಹಾಸಗೈದಿದ್ದ ಪಾತಕಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂಬ ಕೂಗು ದೇಶಾದ್ಯಂತ ಕೇಳಿಬರುತ್ತಿದೆ. ಈ ಬಗ್ಗೆ ನ್ಯಾಯಾಲಯ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಮಂಗಳವಾರ ದೆಹಲಿ ತ್ವರಿತ ನ್ಯಾಯಾಲಯವು ಎಲ್ಲ ನಾಲ್ವರು ಆರೋಪಿಗಳ ಅಪರಾಧವನ್ನು ಧೃಡೀಕರಿಸಿತ್ತು. ಅಪರಾಧಿಗಳಾದ ಮುಖೇಶ್ ಸಿಂಗ್, ಅಕ್ಷಯ್ ಸಿಂಗ್, ವಿನಯ್ ಶರ್ಮ ಮತ್ತು ಪವನ್ ಗುಪ್ತ ವಿರುದ್ಧ ಅತ್ಯಾಚಾರ, ಕೊಲೆ, ಅಪಹರಣ, ಕೊಲೆ ಯತ್ನ, ಸಾಕ್ಷ್ಯನಾಶ ಸೇರಿದಂತೆ 14 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಎಲ್ಲಾ ಪ್ರಕರಣಗಳಲ್ಲೂ ನಾಲ್ವರ ಆರೋಪಗಳು ಸಾಬೀತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.