ಪ್ರಧಾನ ಸುದ್ದಿ

ಲಂಡನ್‌ನಲ್ಲಿ ಬಾಬಾ ರಾಮ್‌ದೇವ್ ವಿಚಾರಣೆ

Published On :

ಲಂಡನ್: ಯೋಗಗುರು ಬಾಬಾ ರಾಮದೇವ್ ಅವರನ್ನು ಲಂಡನ್‌ನ ಹೆಥ್ರೂ ವಿಮಾನ ನಿಲ್ದಾಣದಲ್ಲಿ ಬ್ರಿಟನ್‌ನ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ರಾತ್ರಿ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಬ್ಯುಸಿನೆಸ್ ವೀಸಾದ ಬದಲು ವಿಸಿಟರ್ಸ್ ವೀಸಾದ ಮೂಲಕ ಬ್ರಿಟನ್‌ಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, 6 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ರಾಮದೇವ್ ತಮ್ಮ ಜತೆ ಕೊಂಡೊಯ್ಯುತ್ತಿರುವ ಔಷಧದ ಕುರಿತಾಗಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಆದರೆ, ರಾಮದೇವ್ ಅವರ ವಕ್ತಾರ ತೇಜರ್‌ವಾಲಾ ಈ ವರದಿಗಳನ್ನು ಅಲ್ಲಗಳೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.