ಪ್ರಧಾನ ಸುದ್ದಿ

ಅಂಗನವಾಡಿಗಳಿಗೆ ವೇತನ ಹೆಚ್ಚಳ

Published On :

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡಗಳ ಬಾಡಿಗೆಯನ್ನೂ ಹೆಚ್ಚಿಸಲಾಗಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ. ವಿಕಾಸಸೌಧದಲ್ಲಿ ಸೋಮವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಈ ವಿಷಯ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ 500, ಸಹಾಯಕಿಯರಿಗೆ 250, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 250 ಸಹಾಯಧನ ಹೆಚ್ಚಳ ಮಾಡಲಾಗಿದೆ ಎಂದರು.
ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 3 ಸಾವಿರ, ಸಹಾಯಕಿಯರಿಗೆ 1,500 ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 1500 ಗೌರವಧನ ನೀಡುತ್ತದೆ. ಇದರ ಜತೆರೆ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 1500, ಸಹಾಯಕಿಯರಿಗೆ 750 ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 750 ನೀಡುತ್ತಿದೆ. ಇದೀಗ ಸರ್ಕಾರ ಸಹಾಯಧನ ಹೆಚ್ಚಿಸಿರುವುದರಿಂದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ, ಸಹಾಯಕಿಯರಿಗೆ 1 ಸಾವಿರ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಗೌರವಧನ ನೀಡಿದಂತಾಗುತ್ತದೆ ಎಂದು ವಿವರಿಸಿದರು.

ಅಂಗನವಾಡಿ ಬಾಡಿಗೆ ಹೆಚ್ಚಳ: ಅದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿಗಳಿಗೆ ನೀಡುತ್ತಿದ್ದ ಬಾಡಿಗೆಯನ್ನೂ ಹೆಚ್ಚಿಸಲಾಗಿದೆ. ಈ ಹಿಂದೆ 200 ನೀಡುತ್ತಿದ್ದ ಬಾಡಿಗೆ ಮೊತ್ತವನ್ನು 750ಕ್ಕೆ ಹೆಚ್ಚಿಸಲಾಗಿದೆ. ನಗರ ಪಾಲಿಕೆ ವ್ಯಾಪ್ತಿಯ ಅಂಗನವಾಡಿ ಕಟ್ಟಡ ಬಾಡಿಗೆಯನ್ನು 500ರಿಂದ 3 ಸಾವಿರಕ್ಕೆ, ಬಿಬಿಎಂಪಿಯಲ್ಲಿ 750ರಿಂದ 5 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಅದೇ ರೀತಿ ಮಗು ಮತ್ತು ಬಾಣಂತಿಗೆ ಪೌಷ್ಟಿಕ ಆಹಾರ ನೀಡಲು ನಿಗದಿಪಡಿಸಲಾಗಿದ್ದ ಮೊತ್ತವನ್ನೂ ಹೆಚ್ಚಿಸಲಾಗಿದೆ. ಈ ಹಿಂದೆ 6ರಿಂದ 72 ತಿಂಗಳ ಮಗುವಿಗೆ ದಿನವೊಂದಕ್ಕೆ 4 ನೀಡುತ್ತಿದ್ದು, ಅದನ್ನು 6ಕ್ಕೆ ಹೆಚ್ಚಿಸಲಾಗಿದೆ. ಅದೇ ರೀತಿ ತೀರಾ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಗುವಿಗೆ ನೀಡುತ್ತಿದ್ದ 6ನ್ನು 9ಕ್ಕೆ ಏರಿಸಲಾಗಿದೆ. ಬಾಣಂತಿಯರಿಗೆ ನೀಡುತ್ತಿದ್ದ ವೆಚ್ಚವನ್ನು 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಎಂಟು ಜಿಲ್ಲೆಗಳಲ್ಲಿ ಈ ವೆಚ್ಚ ಹೆಚ್ಚಳಕ್ಕೆ ಅನುಮತಿ ಸಿಕ್ಕಿದ್ದು, ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.