ಎಲ್ಲದಕ್ಕೂ ಆಧಾರವಲ್ಲ!

- ಅಕ್ರಮ ವಲಸಿಗರಿಗೆ ಆಧಾರ್ ನೀಡದಂತೆ ವರಿಷ್ಠ ನ್ಯಾಯಾಲಯ ಸೂಚನೆ
- ನ್ಯಾ. ಪುಟ್ಟಸ್ವಾಮಿ ಸೇರಿದಂತೆ ಹಲವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ನವದೆಹಲಿ: ಗ್ಯಾಸ್ ಸೇರಿದಂತೆ ಸರ್ಕಾರದ ಸಬ್ಸಿಡಿಗಳಿಗೆ ಆಧಾರ್ ಬೇಕಂತೇನಿಲ್ಲ...
ಹೀಗಂತ ಕೇಂದ್ರ ಸರ್ಕಾರವೇ ಘಂಟಾಘೋಷವಾಗಿ ಸುಪ್ರೀಂಕೋರ್ಟ್ ಮುಂದೆ ಹೇಳಿದೆ. ಆಧಾರ್ ಕಾರ್ಡ್ ಅನ್ನು ಸ್ವಇಚ್ಛೆಯಿಂದ ಪಡೆಯಬಹುದು, ಆದರೆ ನಾವು ಕಡ್ಡಾಯವೆಂದು ಮಾಡೇ ಇಲ್ಲ ಎಂದು ತಿಳಿಸಿದೆ.
ಇದಕ್ಕೆ ಪ್ರತಿಯಾಗಿ ಅಕ್ರಮ ವಲಸೆಗಾರರಿಗೆ ಯಾವುದೇ ಕಾರಣಕ್ಕೂ ಆಧಾರ್ ನೀಡಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಒಂದು ವೇಳೆ ನೀವು ಆಧಾರ್ ಕಾರ್ಡ್ ನೀಡಿದರೆ ಅವರನ್ನು ನೀವು ಇಲ್ಲೇ ಕಾಯಂ ನಿವಾಸಿಗಳನ್ನಾಗಿ ಮಾಡಿದಂತಾಗುತ್ತದೆ ಎಂದು ಕೋರ್ಟ್ ಹೇಳಿದೆ.
ಕೆಲವೊಂದು ರಾಜ್ಯಗಳು ಆಧಾರ್ ಅನ್ನು ಕಡ್ಡಾಯ ಮಾಡಿವೆ. ಮಹಾರಾಷ್ಟ್ರದಲ್ಲಿ ವಿವಾಹ ನೋಂದಣಿ ಸಂದರ್ಭದಲ್ಲಿ ಆಧಾರ್ ಇರಲೇಬೇಕು ಎಂದು ಕಡ್ಡಾಯ ಮಾಡಿದೆ. ಈ ನಿರ್ಧಾರಗಳನ್ನು ವಿರೋಧಿಸಿ ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪುಟ್ಟಸ್ವಾಮಿ ಅವರನ್ನೊಳಗೊಂಡಂತೆ ಹಲವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿತ್ತು. ಈ ಸಂಬಂಧ ಸ್ಪಷ್ಟಪಡಿಸಿರುವ ಕೇಂದ್ರ ಸರ್ಕಾರ ನಾವು ಆಧಾರ್ ಕಾರ್ಡ್ ಅನ್ನು ಯಾವುದೇ ಯೋಜನೆಗಳಿಗೆ ಕಡ್ಡಾಯ ಮಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.
ಈ ಸಂದರ್ಭದಲ್ಲಿ ಬಾಂಬೆ ಹೈಕೋರ್ಟ್ನಲ್ಲಿ ವೇತನ ನೀಡಲು ಅಲ್ಲಿನ ಸರ್ಕಾರ ಆಧಾರ್ ಕಾರ್ಡ್ ಕೇಳಿರುವ ಬಗ್ಗೆಯೂ ಸುಪ್ರೀಂಕೋರ್ಟ್ ಪ್ರಸ್ತಾಪಿಸಿದೆ. ಸ್ವಇಚ್ಚೆಯಿಂದ ಪಡೆಯುವುದಾದರೆ ಹೀಗೆಲ್ಲಾ ಕಡ್ಡಾಯ ಮಾಡುವುದು ಹೇಗೆ ಎಂದು ಪ್ರಶ್ನಿಸಿದೆ. ಅಲ್ಲದೆ ಗುರುತಿನ ಚೀಟಿ ಇಲ್ಲದೇ ಇರುವ ವ್ಯಕ್ತಿಗಳಿಗೆ ಅನುಕೂಲವಾಗಲಂತೆ ನಾವು ಆಧಾರ್ ಕಾರ್ಡ್ ನೀಡುವ ಯೋಜನೆ ಜಾರಿ ಮಾಡಿದ್ದೇವೆ. ಕೆಲವೊಂದು ಯೋಜನೆಗಳಲ್ಲಿ ಗುರುತಿನ ಚೀಟಿ ಇಲ್ಲದೇ ಇರುವ ಕಾರಣಕ್ಕಾಗಿ ಯೋಜನೆಗಳ ಸೌಲಭ್ಯ ಬಡವರಿಗೆ ಲಭ್ಯವಾಗುತ್ತಿರಲಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


