ಪ್ರಧಾನ ಸುದ್ದಿ

ಆರ್‌ಎಸ್‌ಎಸ್ ಕಾರ್ಯಕ್ಕೆ ಶ್ಲಾಘನೆ

ಆರ್‌ಎಸ್‌ಎಸ್ ಕಾರ್ಯಕ್ಕೆ ಶ್ಲಾಘನೆ
Published On :

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ಬೆಂಗಳೂರಿನಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಪ್ರಚಾರದಲ್ಲಿ ಭಾಗವಹಿಸಿದ್ದ ಅವರು ಬುಧವಾರ ಈ ಹೇಳಿಕೆ ನೀಡಿದರು. ಚುನಾವಣೆ ಸಂದರ್ಭದಲ್ಲಿ ತನ್ನ ಮತದಾರರನ್ನು ಸೆಳೆಯಲು ಆರ್‌ಎಸ್‌ಎಸ್ ಅನುಸರಿಸುತ್ತಿರುವ ಮಾರ್ಗವನ್ನು ನಾವು ಕಲಿತುಕೊಳ್ಳಬೇಕು. ನಿಚ್ಚಳವಾಗಿ ಯಾರು ಬಿಜೆಪಿಗೆ ಮತ ಹಾಕುತ್ತಾರೆ ಎಂಬುದನ್ನು ಗುರುತಿಸುವ ಆರ್‌ಎಸ್‌ಎಸ್, ಅವರನ್ನು ಮತಗಟ್ಟೆಗೆ ಕರೆತರುವಲ್ಲಿ ಯಶಸ್ವಿಯಾಗುತ್ತದೆ. ಆದರೆ ನಾವು ಈ ನಿಟ್ಟಿನಲ್ಲಿ ವಿಫಲರಾಗಿದ್ದೇವೆ. ಹೀಗಾಗಿ ಈ ಚುನಾವಣೆಯಲ್ಲಿ ನಮ್ಮ ಮತದಾರರನ್ನು ಗುರುತಿಸಿ ಮತಗಟ್ಟೆಗೆ ತರುವ ಪ್ರಯತ್ನ ನಡೆಯಬೇಕು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.