ಪ್ರಧಾನ ಸುದ್ದಿ

ರೆಡ್ಡಿಗೆ ಜೈಲಿನಿಂದ ಮುಕ್ತಿಯೇ ಇಲ್ಲ-ರಾಗಾ ಅಪಸ್ವರ

ರೆಡ್ಡಿಗೆ ಜೈಲಿನಿಂದ ಮುಕ್ತಿಯೇ ಇಲ್ಲ-ರಾಗಾ ಅಪಸ್ವರ
Published On :

ಬಳ್ಳಾರಿ/ಮಂಗಳೂರು: ಯುಪಿಎ ಸರ್ಕಾರದ ಭ್ರಷ್ಟಾಚಾರವನ್ನೇ ಪ್ರಚಾರ ವಸ್ತುವಾಗಿಸಿಕೊಂಡು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿರುವ ಬಿಜೆಪಿ ನಾಯಕರಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರದೇ ಧಾಟಿಯಲ್ಲಿ ತಿರುಗೇಟು ನೀಡಿದ್ದಾರೆ.
ಭ್ರಷ್ಟಾಚಾರ ಮಾಡಿದವರನ್ನು ಪಕ್ಕದಲ್ಲಿ ಕುಳ್ಳಿರಿಸಿಕೊಂಡು ಮೋದಿ ಅವರು ಭ್ರಷ್ಟಾಚಾರ ತಡೆಗಟ್ಟುವ ಬಗ್ಗೆ ಮಾತನಾಡುತ್ತಾರೆ. ಜೈಲಿಗೆ ಹೋಗಿ ಬಂದಿರುವವನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಗಣಿ ಕೊಳ್ಳೆ ಹೊಡೆದ ರೆಡ್ಡಿ ಯಾವುದೇ ಕಾರಣಕ್ಕೂ ಹೊರಗೆ ಬರುವುದಿಲ್ಲ ಎಂದು ಹರಿಹಾಯ್ದಿದ್ದಾರೆ.
ಶುಕ್ರವಾರ ಬಳ್ಳಾರಿ ಹಾಗೂ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ, ಕರ್ನಾಟಕದಲ್ಲಿ 5 ವರ್ಷ ಆಡಳಿತ ನಡೆಸಿದ ಬಿಜೆಪಿ ಸಾಧನೆ ಶೂನ್ಯ. ಬಳ್ಳಾರಿಯಲ್ಲಿದ್ದ ಮಂತ್ರಿಗಳು ಗಣಿ ಕದ್ದಿದ್ದಾರೆ. ಆಗ ರಾಜ್ಯದಲ್ಲಿ ಕರ್ನಾಟಕ ಸರ್ಕಾರವಿರಲಿಲ್ಲ. ಬದಲಾಗಿ ಬಳ್ಳಾರಿ ಸರ್ಕಾರವಿತ್ತು. ಬಿಜೆಪಿಯಲ್ಲಿ ಅಧಿಕಾರ ಬಲದಿಂದ ನೈಸರ್ಗಿಕ ಸಂಪತ್ತು ಲೂಟಿ ಮಾಡಿದ್ದಾರೆ. ಆಗ ಸಿಎಂ ಆಗಿದ್ದ ಯಡಿಯೂರಪ್ಪ ಜೈಲಿಗೆ ಹೋಗಿದ್ದರು. ಈಗ ಮತ್ತೆ ಅವರನ್ನೇ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಗಣಿ ಅಕ್ರಮ ಆರೋಪದಿಂದ ಜೈಲು ಸೇರಿರುವ ಜನಾರ್ದನ ರೆಡ್ಡಿ ಯಾವುದೇ ಕಾರಣಕ್ಕೂ ಹೊರಗೆ ಬರುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.