ಪ್ರಧಾನ ಸುದ್ದಿ

ರೆಡ್ಡಿ ಸೋದರರು, ಬಿಎಸ್ವೈ ಲೂಟಿಕೋರರು

ರೆಡ್ಡಿ ಸೋದರರು, ಬಿಎಸ್ವೈ ಲೂಟಿಕೋರರು
Published On :

ಬಳ್ಳಾರಿ: ಜನಾರ್ದನ ರೆಡ್ಡಿ, ಯಡಿಯೂರಪ್ಪ, ಕರುಣಾಕರ ರೆಡ್ಡಿ ಹಾಗೂ ಶ್ರೀರಾಮುಲು ಅಕ್ರಮ ಗಣಿಗಾರಿಕೆಯಿಂದ 1 ಲಕ್ಷ ಕೋಟಿ ಲೂಟಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ರಾಹುಲ್ ಗಾಂಧಿ ಅವರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ಅಕ್ರಮ ಗಣಿಗಾರಿಕೆಯಿಂದ ಬಂದ ಹಣವನ್ನು ಬಿಎಸ್ಸಾರ್ ಕಾಂಗ್ರೆಸ್ಗೆ ಖರ್ಚು ಮಾಡಿದ್ದಾರೆ. ಆ ಪಕ್ಷದ ಮಾಸ್ಟರ್ ಬ್ರೇನ್ ಜನಾರ್ದನ ರೆಡ್ಡಿ. ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜೈಲಿಗೆ ಹೋಗಿರುವ ಜನಾರ್ದನ ರೆಡ್ಡಿ ಹೊರಗಡೆ ಬರಲು ಸಾಧ್ಯವಿಲ್ಲ. ಕರುಣಾಕರ ರೆಡ್ಡಿ ಹಾಗೂ ಶ್ರೀರಾಮುಲು ಮೇಲೂ ತನಿಖೆ ತೂಗು ಕತ್ತಿ ನೇತಾಡುತ್ತಿದೆ ಎಂದರು.

ಬಿಜೆಪಿಯದು ಕೋಮುವಾದ, ಏಕನಾಯಕತ್ವ, ಏಕ ಸಂಸ್ಕೃತಿ ಪ್ರತಿಪಾದನೆ ಮಾಡಿದರೆ, ಕಾಂಗ್ರೆಸ್ ಜಾತ್ಯತೀತ, ಬಹು ಸಂಸ್ಕೃತಿಯನ್ನು ಪ್ರತಿಪಾದಿಸುತ್ತಿದೆ. ದೇಶದ ಜನರ ಒಗ್ಗಟ್ಟು ಕಾಂಗ್ರೆಸ್ನಿಂದ ಮಾತ್ರ. ರಾಷ್ಟ್ರದ ಹಿತದೃಷ್ಟಿಯಿಂದ ಕಾಂಗ್ರೆಸ್ ಬೆಂಬಲಿಸಬೇಕೆಂದರು.
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯಕ್, ಶಾಸಕರಾದ ಅನಿಲ್ ಲಾಡ್, ಎಂ.ಪಿ. ರವೀಂದ್ರ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.