ನ್ಯೂಯಾರ್ಕ್ ಅಧಿಕಾರಿ ಬಂಧನಕ್ಕೆ ಅಮೆರಿಕ ಕ್ಯಾತೆ
ನ್ಯೂಯಾರ್ಕ್: ನ್ಯೂಯಾರ್ಕ್ ನಗರ ಪೊಲೀಸ್ ಅಧಿಕಾರಿಯೊಬ್ಬರನ್ನು ಭಾರತದಲ್ಲಿ ಬಂಧಿಸಿದ ಪ್ರಕರಣಕ್ಕೆ ಅಮೆರಿಕ ಮಾಧ್ಯಮಗಳು ಹೊಸ ತಿರುವು ನೀಡಿವೆ. ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಗಡೆ ಅವರ ಬಂಧನಕ್ಕೆ ಪ್ರತೀಕಾರ ತೀರಿಸುವುದಕ್ಕಾಗಿಯೇ ಭಾರತ ನ್ಯೂಯಾರ್ಕ್ ಪೊಲೀಸ್ ಅಧಿಕಾರಿಯನ್ನು ಬಂಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಜತೆಗೆ, ಬಂಧನದ ವೇಳೆ ಭಾರತೀಯ ಅಧಿಕಾರಿಗಳು, 'ನೀವು ನಮ್ಮ ರಾಜತಾಂತ್ರಿಕ ಅಧಿಕಾರಿಗಳ ಬಟ್ಟೆ ಬಿಚ್ಚಿ ಶೋಧ ಮಾಡುತ್ತೀರಲ್ಲವೇ?' ಎಂದು ಕೇಳಿದ್ದರು ಎಂದೂ ವರದಿಯಲ್ಲಿ ಹೇಳಲಾಗಿದೆ. ನ್ಯೂಯಾರ್ಕ್ ಪೊಲೀಸ್ ಅಧಿಕಾರಿಯೊಬ್ಬರನ್ನು ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಮಾರ್ಚ್ ಮೊದಲ ವಾರದಲ್ಲಿ ಬಂಧಿಸಲಾಗಿತ್ತು. ಬ್ಯಾಗ್ನಲ್ಲಿ ಮೂರು ಸಜೀವ ಗುಂಡುಗಳನ್ನು ಹೊಂದಿದ್ದ ಕಾರಣ ಮ್ಯಾನಿ ಎನ್ಕಾರ್ನೇಸಿಯನ್ರನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದರು. ಇದೇ ವೇಳೆ, ಸುಳ್ಳು ಅಫಿಡವಿಟ್ ಸಲ್ಲಿಸಿ ಆದರ್ಶ ಸೊಸೈಟಿಯ ಫ್ಲ್ಯಾಟ್ ಖರೀದಿಗೆ ಸಂಬಂಧಿಸಿ ದೇವಯಾನಿ ಖೋಬ್ರಗಡೆ ಮತ್ತು ಆಕೆಯ ತಂದೆ ಉತ್ತಮ್ ಖೋಬ್ರಗಡೆ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಸಿಬಿಐ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

