ಮೋದಿ ಟೀಕಿಸಿದ ಸಿಎಂ ಕ್ಷಮೆ ಕೇಳಲಿ

ಬೆಂಗಳೂರು/ಬಳ್ಳಾರಿ/ಕುಣಿಗಲ್: ನರೇಂದ್ರ ಮೋದಿಯವರನ್ನು ನರಹಂತಕ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಅವರನ್ನು ತರಾಟೆಗೆ ತೆಗೆದುಕೊಂಡರು.
ಬಳ್ಳಾರಿ, ಕುಣಿಗಲ್ನ ಪ್ರಚಾರ ಸಭೆ ಹಾಗೂ ಬೆಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಲು ಬಿಜೆಪಿಯ ಶಬ್ದಕೋಶದಲ್ಲಿ ಯಾವುದೇ ಪದವಿಲ್ಲ. ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಬಾಯಿಗೆ ಬಂದಂತೆ ಮಾತನಾಡುವುದು ಶೋಭೆ ತರುವುದಿಲ್ಲ. ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.
ಮುಖ್ಯಮಂತ್ರಿ ತವರು ಜಿಲ್ಲೆಯಲ್ಲೇ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರವನ್ನು ಸಮರ್ಥವಾಗಿ ನಡೆಸಲು ಅಸಮರ್ಥ ವ್ಯಕ್ತಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ಬಗ್ಗೆ ಅವಹೇಳನಕಾರಿ ಮಾತನಾಡುತ್ತಿದ್ದಾರೆ ಎಂದು ರಾಜನಾಥ್ ಸಿಂಗ್ ಟೀಕಿಸಿದರು.
-ಪ್ರಧಾನಿ ಅಭ್ಯರ್ಥಿ ಘೋಷಿಸಲಾಗದ ಕಾಂಗ್ರೆಸ್ ನೈತಿಕವಾಗಿ ದಿವಾಳಿಯಾಗಿದೆ.
-ಕಳೆದ 10 ವರ್ಷದಲ್ಲಿ ಕೇಂದ್ರ ಸರ್ಕಾರ 5.50 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿದೆ.
-ಈ ದೇಶ ಕಂಡ ಅತಿ ಕೊಮುವಾದಿ ಪಕ್ಷವೆಂದರೆ ಕಾಂಗ್ರೆಸ್.
-ಕಳೆದ 10 ವರ್ಷದಲ್ಲಿ ದೇಶಿ ಅಥವಾ ವಿದೇಶಿ ಹೂಡಿಕೆ ಭಾರತದಲ್ಲಿ ಆಗಿಲ್ಲ.
-ಗರೀಬಿ ಹಠಾವೋ ಎನ್ನುವುದನ್ನು ಘೋಷಣೆಗೆ ಸೀಮಿತಗೊಳಿಸಿರುವ ಕಾಂಗ್ರೆಸ್
ಸ್ಪಷ್ಟನೆ ನೀಡಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಜರಾತ್ ಮುಖ್ಯಮಂತ್ರಿ ಮೋದಿ ಅವರನ್ನು ನರಹಂತಕ ಎಂದು ಜರಿದಿದ್ದ ಬಗ್ಗೆ ಅವರಿಂದ ಸ್ಪಷ್ಟೀಕರಣ ಬಂದಿದೆ. ಆ ಸ್ಪಷ್ಟೀಕರಣವನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಲಾಗಿದೆ. ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳಲಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅನಿಲ್ಕುಮಾರ್ ಝಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


