ಪ್ರಧಾನ ಸುದ್ದಿ

ಪ್ರತ್ಯೇಕ ದುರ್ಘಟನೆ 13 ಮಂದಿ ದಾರುಣ ಸಾವು

ಪ್ರತ್ಯೇಕ ದುರ್ಘಟನೆ 13 ಮಂದಿ ದಾರುಣ ಸಾವು
Published On :

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ ಹಾಗೂ ಹಿರಿಯೂರಿನಲ್ಲಿ ಬುಧವಾರ ನಡೆದ ಪ್ರತ್ಯೇಕ ಅವಘಡದಲ್ಲಿ ಒಂದೇ ಕುಟುಂಬದ ಐವರು ಸೇರಿ 13 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಹಿರಿಯೂರಿನ ಮೇಟಿಕುರ್ಕಿ ಬಳಿ ಖಾಸಗಿ ಬಸ್‌ಗೆ ಬೆಳಗಿನ ಜಾವ 2.15ಕ್ಕೆ ಬೆಂಕಿ ಹೊತ್ತಿ ಕೊಂಡು 6 ಮಂದಿ ಸಜೀವ ದಹನವಾಗಿದ್ದಾರೆ. ಬೈಲಹೊಂಗಲದ ಉಡಕೇರಿ ಬಳಿ ಕ್ರೂಸರ್ ಪಲ್ಟಿಯಾಗಿ ಹಲಸಿ ಗ್ರಾಮದ ಐವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಸಾಯಿನಗರ ಬಳಿ ರೇಲ್ವೆ ಕ್ರಾಸಿಂಗ್‌ನಲ್ಲಿ ಬೊಲೇರೋಗೆ ಚಾಲುಕ್ಯ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಐವತ್ತು ಮಂದಿಗೆ ಗಾಯ
ಗುವಾಹಟಿ:
ಅಸ್ಸಾಂನ ತೆಗ್ರಿಯಾ ದಲ್ಲಿ ಬುಧವಾರ ಬೆಳಗ್ಗೆ ರೈಲು ಹಳಿ ತಪ್ಪಿ 50 ಮಂದಿ ಗಾಯಗೊಂಡರು. ಈ ಪೈಕಿ 19 ಮಂದಿ ಸ್ಥಿತಿ ಗಂಭೀರವಾಗಿದ್ದು, ಗುವಾಹಟಿ ವೈದ್ಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಳುಗಿದ ಹಡಗು 300 ಜನ ನಾಪತ್ತೆ
ಸಿಯೋಲ್:
ದಕ್ಷಿಣ ಕೊರಿಯಾದಲ್ಲಿ 470ಕ್ಕೂ ಅಧಿಕ ಮಂದಿಯನ್ನು ಹೊತ್ತೊಯ್ಯುತ್ತಿದ್ದ ಹಡಗೊಂದು ಬುಧವಾರ ಸಮುದ್ರಪಾಲಾಗಿದೆ. ನಾಲ್ವರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.