ಪ್ರಧಾನ ಸುದ್ದಿ

ಸೋಲು-ಗೆಲವಿಗೆ ನಾನು, ಮುಖ್ಯಮಂತ್ರಿ ಜವಾಬ್ದಾರರು

ಸೋಲು-ಗೆಲವಿಗೆ ನಾನು, ಮುಖ್ಯಮಂತ್ರಿ ಜವಾಬ್ದಾರರು
Published On :

ಬೆಂಗಳೂರು: 'ಲೋಕಸಭಾ ಚುನಾವಣೆಯ ಸೋಲು-ಗೆಲವಿಗೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾನ ಜವಾಬ್ದಾರರಾಗಿರುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ಮತದಾನದ ನಂತರ ನಡೆಸಿದ ಆಂತರಿಕ ಲೆಕ್ಕಾಚಾರದ ಪ್ರಕಾರ, ಕಾಂಗ್ರೆಸ್ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ ಫಲಿತಾಂಶದ ಆಧಾರದ ಮೇಲೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ ಎಂಬುದು ಕೇವಲ ಊಹಾಪೋಹ. ಜತೆಗೆ ರಾಜ್ಯದಿಂದ ಇಂತಿಷ್ಟೇ ಕ್ಷೇತ್ರಗಳಲ್ಲಿ ಜಯಗಳಿಸಬೇಕು ಎಂದು ಎಐಸಿಸಿ ನಮಗೆ ಟಾರ್ಗೆಟ್ ನೀಡಿಲ್ಲ. ನನಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ಇದೆ. ನಮ್ಮ ಮಿತಿಯಲ್ಲಿ ನಾವು ಕೆಲಸ ಮಾಡಿದ್ದೇವೆ. ಅದೇ ರೀತಿ ಸೋಲು-ಗೆಲವಿನ ಹೊಣೆಗಾರಿಕೆಯನ್ನೂ ಸಮಾನವಾಗಿ ಹೊರುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಹೇಳಿದರು. ಕಾಂಗ್ರೆಸ್‌ಗೆ ಅತಿ ಹೆಚ್ಚು ಸ್ಥಾನ ಸಿಗುವುದು ಖಚಿತ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.