ಕಾಮುಕ ಪೂಜಾರಿಗೆ ಗಲ್ಲು ಶಿಕ್ಷೆ
ಬೀದರ್: ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ವ್ಯಕ್ತಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯವು ಸೋಮವಾರ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಮಹತ್ವದ ತೀರ್ಪು ನೀಡಿದೆ.
ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದ ಜ್ಯೋತಿಬಾ ಪೂಜಾರಿ(32) ಗಲ್ಲು ಶಿಕ್ಷಗೆ ಗುರಿಯಾಗಿದ್ದು, ಈತನು 2012ರ ನ.11ರಂದು ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಕಳೇಬರವನ್ನು ಮನೆಯ ತಿಪ್ಪೆ ಗುಂಡಿಯಲ್ಲಿ ಬಿಸಾಡಿದ್ದನು.
ತಿಪ್ಪೆ ಗುಂಡಿಯಲ್ಲಿ ಮಗು ಪತ್ತೆಯಾಗಿರುವ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸರು ತನಿಖೆ ಕೈಗೊಂಡು ಶಂಕೆಯ ಆಧಾರದ ಮೇಲೆ ಮರುದಿನವೇ ಜ್ಯೋತಿಬಾನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿದ್ದನ್ನು ಒಪ್ಪಿಕೊಂಡಿದ್ದಾನೆ.
ಬಾಲಕಿಗೆ ಚಾಕೊಲೇಟ್ ಕೊಡಿಸುವ ನೆಪದಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ನಂತರ ಬಾಲಕಿ ಮೃತಪಟ್ಟಿದ್ದಳು. ಈ ಕುರಿತು ಭಾಲ್ಕಿ ಗ್ರಾಮೀಣ ಠಾಣೆಯ ಸಿಪಿಐ ಎಸ್.ಜಿ. ಕಳ್ಳಿಗುಡ್ಡ ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶಶಿಕಲಾ ಉರಣ್ಕರ್ ಅವರು ಸೋಮವಾರ ತೀರ್ಪು ಪ್ರಕಟಿಸಿ ಆರೋಪಿ ಜ್ಯೋತಿಬಾಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಎಂ.ಲಮಾಣಿ ವಕೀಲರು ವಾದ ಮಂಡಿಸಿದರು. ಜ್ಯೋತಿಬಾ ವಿರುದ್ಧ ಆಂಧ್ರದ ಜಹೀರಾಬಾದ್ನಲ್ಲಿ ಕೊಲೆ ಹಾಗೂ ಭಾಲ್ಕಿಯಲ್ಲಿ ಕಳ್ಳತನ ಪ್ರಕರಣಗಳಿವೆ. ಕೆಲ ತಿಂಗಳ ಹಿಂದೆ ಮಹಿಳೆಯರ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಆಟೋ ಚಾಲಕನಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ಇದು ಎರಡನೇ ಮಹತ್ವದ ತೀರ್ಪಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

