ಪ್ರಧಾನ ಸುದ್ದಿ

ತಡರಾತ್ರಿ ಪಾರ್ಟಿ ಮಾಡೋರು ಪ್ರಧಾನಿ ಆಗ್ಬೇಕೇ?

ತಡರಾತ್ರಿ ಪಾರ್ಟಿ ಮಾಡೋರು ಪ್ರಧಾನಿ ಆಗ್ಬೇಕೇ?
Published On :

ಕನ್ನಡಪ್ರಭ ವಾರ್ತೆ  ಬೆಂಗಳೂರು  ಏ.23
ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಯ ಮಂಗಳೂರು ಊಟೋಪಚಾರದ ವಿಚಾರ ಈಗ ಸಾಮಾಜಿಕ ತಾಣಗಳಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.
ರಾಜ್ಯ ಬಿಜೆಪಿಯ ಅಲ್ಪಸಂಖ್ಯಾತ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ತಮ್ಮ ಟ್ವೀಟರ್ ಅಕೌಂಟ್‌ನಲ್ಲಿ ರಾಹುಲ್ ಗಾಂಧಿ ತಮ್ಮ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿರುವ ಚಿತ್ರವನ್ನು ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್‌ನ ಸಂಭಾವ್ಯ ಪ್ರಧಾನಿ ಅಭ್ಯರ್ಥಿಯು ಯುವತಿಯೊಂದಿಗೆ ಮಧ್ಯರಾತ್ರಿ 2 ಗಂಟೆವರೆಗೆ ಮಂಗಳೂರಿನ ಓಷನ್ ಪರ್ಲ್ ಹೋಟೆಲ್‌ನಲ್ಲಿ ಕುಡಿಯುತ್ತಿದ್ದರು. ಭಾರತವನ್ನು ದೇಶವೇ ಕಾಯಬೇಕು ಎಂದು ಟ್ವೀಟಿಸಿದ್ದಾರೆ.
ಸರ್ಕೀಟ್ ಹೌಸ್‌ನಲ್ಲಿ ತಂಗಿದ್ದ ರಾಹುಲ್ ಸುಮಾರು 12 ಗಂಟೆಗೆ ಹೋಟೆಲ್‌ಗೆ ತೆರಳಿ ನಂತರ ಪಾರ್ಟಿ ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್‌ಗೂ ಪ್ರವೇಶ ನಿರಾಕರಿಸಲಾಗಿತ್ತು ಎಂದು ಮಾಣಿಪ್ಪಾಡಿ ಟ್ವೀಟ್ ಮಾಡಿದ್ದಾರೆ. ಈ ಚಿತ್ರ ಮೊದಲೇ ಪ್ರಚಾರದಲ್ಲಿತ್ತಾದರೂ, ತಡರಾತ್ರಿ ತನಕ ಪಾರ್ಟಿ ಮಾಡಿದ್ದಾರೆ ಎಂದು ಆರೋಪಿಸುವ ಮೂಲಕ ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಲೋಕಸಭೆ ಚುನಾವಣೆ ಪ್ರಯುಕ್ತ ಏ.4ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿಗೆ ಆಗಮಿಸಿದ್ದರು. ಮರುದಿನ ಕೇರಳದಲ್ಲಿ ಚುನಾವಣೆ ಪ್ರಚಾರ ನಿಗದಿಯಾದ ಹಿನ್ನೆಲೆಯಲ್ಲಿ ರಾತ್ರಿ ಮಂಗಳೂರಿನಲ್ಲಿಯೇ ತಂಗಲು ರಾಹುಲ್ ನಿರ್ಧರಿಸಿದ್ದರು.
ಅನ್ವರ್ ಮಾಣಿಪ್ಪಾಡಿ ಟ್ವೀಟ್ ಮಾಡಿರುವ ಚಿತ್ರದಲ್ಲಿರುವ ಯುವತಿಯ ಬಗೆಗೂ ಸಾಕಷ್ಟು ಮಾತುಗಳು ಕೇಳಿಬಂದಿದ್ದವು. ಆದರೆ ಸಂಭಾವ್ಯ ಪ್ರಧಾನಿ ಅಭ್ಯರ್ಥಿಯು ತಡರಾತ್ರಿವರೆಗೆ ಹೋಟೆಲ್‌ನಲ್ಲಿ ಸ್ನೇಹಿತರೊಂದಿಗೆ ಕುಡಿಯುತ್ತಿದ್ದರು ಎಂದು ಟ್ವೀಟಿಸುವ ಮೂಲಕ ಮಾಣಿಪ್ಪಾಡಿ ಅವರು ಹೊಸದೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಅನ್ವರ್ ಮಾಣಿಪ್ಪಾಡಿ ಹೇಳುವ ಪ್ರಕಾರ ರಾಹುಲ್ ಗಾಂಧಿ ವಾಸ್ತವ್ಯಕ್ಕಾಗಿ ಮಂಗಳೂರಿನ ಸರ್ಕೀಟ್ ಹೌಸ್‌ನಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಆದರೆ ತಡರಾತ್ರಿಯಲ್ಲಿ ಹೋಟೆಲ್‌ನಲ್ಲಿ ಪಾರ್ಟಿ ಮಾಡುವ ಸಲುವಾಗಿ ಭದ್ರತೆಯನ್ನು ಕಡೆಗಣಿಸಿ ಮಧ್ಯರಾತ್ರಿ 12 ಗಂಟೆಗೆ ರಾಹುಲ್ ಹೋಟೆಲ್‌ಗೆ ಆಗಮಿಸಿದ್ದರು. ಚಿತ್ರದಲ್ಲಿ ಕಾಣಿಸುವಂತೆ ಆ ಭೋಜನಕೂಟದಲ್ಲಿ ರಾಹುಲ್ ಹೊರತುಪಡಿಸಿ ಇಬ್ಬರು ಯುವಕರು ಹಾಗೂ ಓರ್ವ ಯುವತಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.