ನಿಸ್ವಾರ್ಥ ಸೇವೆಯಿಂದ ಸಮಾಜದ ಬದಲಾವಣೆ ಸಾಧ್ಯ
ಕನ್ನಡಪ್ರಭ ವಾರ್ತೆ, ಭಾಲ್ಕಿ, ಏ.23
ಮಠಗಳ ನಿಸ್ವಾರ್ಥ ಸೇವೆಯಿಂದ ಸಮಾಜದ ಬದಲಾವಣೆ ಸಾಧ್ಯ ಎಂದು ಬೆಂಗಳೂರಿನ ಕನ್ನಡಪ್ರಭ ಪತ್ರಿಕೆಯ ಅಂಕಣಕಾರ ಎ.ಆರ್.ಮಣಿಕಾಂತ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಚನ್ನಬಸಾಶ್ರಮದಲ್ಲಿ ಲಿಂ.ಡಾ.ಚನ್ನಬಸವ ಪಟ್ಟದ್ದೇವರ 15ನೇ ಸ್ಮರಣೋತ್ಸವ ಹಾಗೂ ವಚನ ಜಾತ್ರೆ -2014 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು, ಬಸವಾದಿ ಶರಣರ ತತ್ವಗಳನ್ನು ಎತ್ತಿ ಹಿಡಿದು ಶೋಷಣೆರಹಿತ ಸಮಾಜ ಕಟ್ಟುವ ನಿಟ್ಟಿನಲ್ಲಿ ರಾಜ್ಯದ ಬೆರಳಯೆಣಿಕೆಯ ಮಠಗಳಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಕೊಡುಗೆ ಅನನ್ಯ ಎಂದು ಬಣ್ಣಿಸಿದರು.
ಶರಣರ ತತ್ವ: ಸಾಂಸ್ಕೃತಿಕ, ರಾಜಕೀಯ ಪ್ರಜ್ಞೆ ಮೂಡಿಸುವ ಕೆಲಸ ಮಠಗಳಿಂದ ಆಗಬೇಕು. ಸರಳ, ಸಜ್ಜನಿಕೆಗೆ ಹೆಸರಾದ ಡಾ. ಚನ್ನಬಸವ ಪಟ್ಟದ್ದೇವರು ಬಸವಾದಿ ಶರಣರ ತತ್ವಗಳನ್ನು ಮೈಗೂಡಿಸಿಕೊಂಡು ಜಾತಿ ರಹಿತ ಸಮಾಜ ಕಟ್ಟ ಬಯಸಿದವರು, ದಲಿತರಿಗೆ ಲಿಂಗ ದೀಕ್ಷೆ ನೀಡಿ ಸಮಾಜದ ಮುಖ್ಯವಾಹಿನಿಗೆ ತಂದ ಕೀರ್ತಿ ಪಟ್ಟದ್ದೇವರಿಗೆ ಸಲ್ಲುತ್ತದೆ ಎಂದರು.
ಅನುಭಾವ ಗಾಥೆ: ಬದುಕು ಒಂದು ಸುಂದರವಾದ ಅನುಭಾವ ಗಾಥೆಯಾಗಿದೆ, ಅನುಭವದ ಮಾತುಗಳನ್ನು ಆಲಿಸಿ ಅವುಗಳನ್ನು ಮೈಗೂಡಿಸಿಕೊಳ್ಳುವುದರಿಂದ ಬದುಕು ಸುಂದರವಾಗಿಸಿಕೊಳ್ಳಬಹುದು. ಇದರಿಂದ ಸಮಾಜಕ್ಕೂ ಹಾಗೂ ಮನಸ್ಸಿಗೂ ನೆಮ್ಮದಿ ದೊರೆಯುತ್ತದೆ ಎಂದು ತಿಳಿಸಿದರು.
ಭಾಲ್ಕಿಯ ಡಾ.ಬಸವಲಿಂಗ ಪಟ್ಟದ್ದೇವರು ಭಕ್ತರಲ್ಲಿ ಶರಣರ ವಚನಗಳು ಮನೆ ಮಾಡಿಕೊಳ್ಳಲಿ, ವರ್ಷದಲ್ಲಿ ಎರಡು ಬಾರಿ ದೊಡ್ಡ ಪ್ರಮಾಣದ ಕಾರ್ಯಕ್ರಮವನ್ನು ಆಯೋಜಿಸಿ ಮಹಾನುಭಾವಿಗಳ ಅನುಭವವನ್ನು ಈ ಭಾಗದ ಜನರಿಗೆ ಆಲಿಸಲು ಅನುವು ಮಾಡಿಕೊಡುತ್ತಿದ್ದಾರಲ್ಲ. ಇಂತಹ ಅದ್ಭುತ ದೊಡ್ಡತನ ಹೊಂದಿರುವ ಭಾಲ್ಕಿಶ್ರೀಗಳನ್ನು ಎಷ್ಟು ಕೊಂಡಾಡಿದ್ದರೂ ಕಡಿಮೆಯೇ ಎಂದು ಪ್ರಶಂಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

