ಪ್ರಧಾನ ಸುದ್ದಿ

ಸರ್ಕಾರದಲ್ಲಿ ಈಗ ಮುಖ್ಯಸ್ಥರೇ ಇಲ್ಲ

ಸರ್ಕಾರದಲ್ಲಿ ಈಗ ಮುಖ್ಯಸ್ಥರೇ ಇಲ್ಲ
Published On :

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರ ಇರುವಾಗ ಮತ್ತು ಮುಖ್ಯಮಂತ್ರಿಗಳೂ ಇಲ್ಲದಿರುವಾಗ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಕಾರ್ಯಾಗಾರದ ನೆಪದಲ್ಲಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಕನ್ನಡಪ್ರಭಕ್ಕೆ ಲಭ್ಯ ಮಾಹಿತಿ ಪ್ರಕಾರ, ಮುಖ್ಯ ಕಾರ್ಯದರ್ಶಿಗಳು ಕರ್ತವ್ಯದ ಮೇಲೆಯೇ ವಿದೇಶಕ್ಕೆ ತೆರಳಿದ್ದಾರೆ. ಸರ್ಕಾರದ ಭೂಚೇತನ ಕಾರ್ಯಕ್ರಮದ ಬಗ್ಗೆ ಹಾಲೆಂಡ್‌ನಲ್ಲಿ ನಡೆಯುತ್ತಿರುವ ಕಾರ್ಯಾಗಾರದಲ್ಲಿ ಭಾಗವಹಿಸಲು ಏ. 24ಕ್ಕೆ ತೆರಳಿದ್ದು, 29ಕ್ಕೆ ವಾಪಸಾಗಲಿದ್ದಾರೆ. ಮುಖರ್ಜಿ ವಿದೇಶಕ್ಕೆ ತೆರಳುವ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ತೆರವಾಗಿರಲಿಲ್ಲ. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ವಿಶ್ರಾಂತಿಗೆ ತೆರಳಿದ್ದಾರೆ.
ಸಂಹಿತೆ ತೆರವಾದರೂ ಕೆಲ ಕಾರ್ಯಕ್ರಮಗಳಲ್ಲಿ ಸಚಿವರು ನೇರ ಭಾಗವಹಿಸುವುದು ಕಷ್ಟ. ಇಂಥ ಸಂದರ್ಭ ಆಡಳಿತ ಯಂತ್ರವನ್ನು ಮುನ್ನಡೆಸುವ ಜವಾಬ್ದಾರಿ ಮುಖ್ಯ ಕಾರ್ಯದರ್ಶಿ ಮೇಲೆಯೇ ಇರುತ್ತದೆ. ಕುಡಿಯುವ ನೀರು, ಅಭಿವೃದ್ಧಿ ಯೋಜನೆ, ಬರ ಪರಿಹಾರ ಕಾಮಗಾರಿಗಳ ನಿರ್ವಹಣೆ ನೊಗ ಅವರ ಮೇಲೆಯೇ ಇರುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.