ಹಿಪ್ಪರಗಿ ಡ್ಯಾಂನಿಂದ ನೀರು ಬಿಡಲ್ಲ
ಜಮಖಂಡಿ: ತಾಲೂಕಿನ ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವುದು ಅಸಾಧ್ಯ ಎಂದು ಶಾಸಕ ಸಿದ್ದು ನ್ಯಾಮಗೌಡ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಪಾಟೀಲ ಅವರು ಹಿಪ್ಪರಗಿ ಬ್ಯಾರೇಜ್ನಲ್ಲಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲದೆ ಮಂಗಳವಾರ 0.6 ಟಿಎಂಸಿ ನೀರು ಬಿಡಿಸುವುದಾಗಿ ಹೇಳಿರಬಹುದು. ಆದರೆ ಸದ್ಯ ಹಿಪ್ಪರಗಿ ಬ್ಯಾರೇಜ್ನಲ್ಲಿ ಸಂಗ್ರಹವಿರುವ ನೀರು ಜಮಖಂಡಿ-ರಬಕವಿ-ಬನಹಟ್ಟಿ ಶಹರದ ಜನರಿಗೆ ಕುಡಿವ ನೀರಿಗಾಗಿ ಕಾಯ್ದಿರಿಸಲಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಿದೆ ಮತ್ತು ಮಹಾರಾಷ್ಟ್ರದ ಸಿಎಂ ಮತ್ತೊಂದು ರಾಜ್ಯದ ಉಸ್ತುವಾರಿ ವಹಿಸಿಕೊಂಡಿರುವುದರಿಂದ ಕೊಯ್ನಾ ನೀರು ಬಿಡಿಸುವ ಕುರಿತು ಮಾತುಕತೆ ನಡೆಸಲು ಸಾಧ್ಯವಾಗಿಲ್ಲ. ಏ.29ರಂದು ರಾಜ್ಯದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಮುಂಬೈಗೆ ತೆರಳಿ ಕೊಯ್ನಾ ಜಲಾಶಯದಿಂದ ನೀರು ಬಿಡಿಸುವ ಬಗ್ಗೆ ಮಹಾರಾಷ್ಟ್ರದ ನೀರಾವರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ತಕ್ಷಣ ಕೊಯ್ನಾ ಅಣೆಕಟ್ಟೆಯಂದ ನೀರು ಬಿಡಿಸಲು ಪ್ರಯತ್ನ ಮಾಡುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

