ಪ್ರಧಾನ ಸುದ್ದಿ

ಪ್ರಣಾಳಿಕೆ ಜಾರಿಗೆ ನಾಲ್ಕು ವರ್ಷ ಸಮಯವಿದೆ: ಸಿಎಂ ಸಿದ್ದರಾಮಯ್ಯ

ಪ್ರಣಾಳಿಕೆ ಜಾರಿಗೆ ನಾಲ್ಕು ವರ್ಷ ಸಮಯವಿದೆ: ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳಲ್ಲವನ್ನೂ ಈಡೇರಿಸುವುದಕ್ಕೆ ಇನ್ನೂ ನಾಲ್ಕು ವರ್ಷ ಕಾಲಾವಧಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ನಿಯೋಗಗಳ ಜತೆ ಚರ್ಚೆ ನಡೆಸುವುದಕ್ಕೆ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ಹೇಳಿಕೆ ನೀಡುವ ಮೂಲಕ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ನಾಯಕತ್ವ ಬದಲಾವಣೆ ಸಾಧ್ಯತೆ ಇದೆ ಎಂಬ ಮಾತುಗಳನ್ನು ಪರೋಕ್ಷವಾಗಿ ತಳ್ಳಿ ಹಾಕಿದ್ದಾರೆ.
ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಸೇರಿದಂತೆ ಕೆಲ ಜನಪ್ರಿಯ ಯೋಜನೆಗಳನ್ನು ಸರ್ಕಾರ ಈ ವರ್ಷ ಜಾರಿಗೆ ತರದೇ ಇರಲು ನಿರ್ಧರಿಸಿದೆಯೇ? ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಪ್ರಣಾಳಿಕೆಯನ್ನು ಐದು ವರ್ಷ ಹೇಗೆ ಸರ್ಕಾರ ನಡೆಸಬೇಕೆಂಬ ಬಗ್ಗೆ ತಯಾರಿಸಲಾಗುತ್ತದೆ. ಹೀಗಾಗಿ ಲ್ಯಾಪ್‌ಟಾಪ್ ವಿತರಣೆಯನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ ಮಾಡುತ್ತೇವೆ ಎಂದರು.
ಇದಕ್ಕೂ ಮುನ್ನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಾದ ರಾಮಲಿಂಗರೆಡ್ಡಿ, ಎಚ್.ಆಂಜನೇಯ, ಡಾ.ಎಸ್.ಆರ್.ಪಾಟೀಲ್, ಎಂ.ಬಿ.ಪಾಟೀಲ್ ಹಾಗೂ ತಮ್ಮ ಕೆಲ ಆಪ್ತ ಶಾಸಕರ ಜತೆ ಅವರು ಸುದೀರ್ಘ ಚರ್ಚೆನಡೆಸಿದರು. ನಂತರ ಸಕ್ಕರೆ ಕಾರ್ಖಾನೆ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.