ಪ್ರಧಾನ ಸುದ್ದಿ

ಸಿಡಿಲಿಗೆ ಜಾನುವಾರುಗಳ ಬಲಿ

Published On :

ಬೆಂಗಳೂರು: ರಾಜ್ಯದ ಅಲ್ಲಲ್ಲಿ ಭಾನವಾರ ರಾತ್ರಿ ಹಾಗೂ ಸೋಮವಾರವೂ ಮಳೆ ಆರ್ಭಟ ಮುಂದುವರಿದಿದ್ದು, ಸಿಡಿಲಿನಿಂದ ಜಾನುವಾರುಗಳು ಸಾವನ್ನಪ್ಪಿವೆ. ಕೆಲವು ಕಡೆ ಆಲಿಕಲ್ಲು ಮಳೆಯಾಗಿದೆ. ಬೆಳೆ ಹಾನಿ, ಮನೆಗಳು ಜಖಂಗೊಂಡಿರುವ ಪ್ರಕರಣಗಳು ವರದಿಯಾಗಿವೆ.
ನಾಪೋಕ್ಲು:  ಒಂದು ವಾರದಿಂದ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಆಗುತ್ತಿದ್ದು ಸೋಮವಾರ ಆಲಿಕಲ್ಲು ಸಹಿತ ಮಳೆಯಾಗಿದೆ. ಪಾರಾಣೆ ಗ್ರಾಪಂ ವ್ಯಾಪ್ತಿಯ ಬಲಮುರಿ ಗ್ರಾಮದ ಬಾಕಿಳನಬೆಳ್ಳಿಯಪ್ಪ ಎಂಬವರ ಎತ್ತು ಸಿಡಿಲಿಗೆ ಬಲಿಯಾಗಿದೆ. ಇದೇ ಗ್ರಾಮದ ಪೊಣ್ಣಚ್ಚನ ಸುಬ್ಬಯ್ಯ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಕುಟುಂಬಸ್ಥರು ಪಾರಾಗಿದ್ದಾರೆ. ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಕೆ.ಕೆ. ರಾಮಣ್ಣ, ಪತ್ನಿ ಸೀತಮ್ಮ ಅವರ ವಸತಿಗೃಹದ ಛಾವಣಿಯ ಹೆಂಚುಗಳು ಗಾಳಿಗೆ ಹಾರಿಹೋಗಿದೆ.
ಉಪ್ಪಿನಂಗಡಿ:  ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಒಬ್ಬ ಗಂಭೀರ ಗಾಯಗೊಂಡು, ನಾಲ್ವರು ಅಪಾಯದಿಂದ ಪಾರಾದ ಘಟನೆ ಭಾನುವಾರ ರಾತ್ರಿ ನಡೆದಿದೆ.  ಪಾಂಡಿಬೆಟ್ಟು ನಿವಾಸಿ ಬಾಬು ಎಂಬವರ ಮನೆಗೆ ಭಾನುವಾರ ರಾತ್ರಿ ಸಿಡಿಲು ಬಡಿದಿದ್ದು, ಮನೆಯೊಳಗೆ ಊಟ ಮಾಡುತ್ತಿದ್ದ ಅವರ ತಮ್ಮ, ಗೋಳಿತ್ತೊಟ್ಟು ಗ್ರಾಮ ಪಂಚಾಯಿತಿನಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಾಯಿಲಪ್ಪ(37) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ರಮೇಶ (32), ಗಿರೀಶ (25), ಹರೀಶ (30) ಹಾಗೂ ಸರೋಜ (28)ಎಂಬವರು ಸಿಡಿಲಿನ ಬಡಿತಕ್ಕೆ ಅಘಾತಕ್ಕೊಳಗಾಗಿದ್ದರೂ ಚಿಕಿತ್ಸೆ ಪಡೆದುಕೊಂಡ ಬಳಿಕ ಚೇತರಿಸಿಕೊಂಡಿದ್ದಾರೆ.
ಹಲಗೂರು: ಮಂಡ್ಯ ಜಿಲ್ಲೆ ಹಲಗೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾನುವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗದೆ. ಡಿ. ಹಲಸಹಳ್ಳಿ ಗ್ರಾಮದ ವೃಶುಬೇಂದ್ರಸ್ವಾಮಿ ಎಂಬುವರ ಮನೆಯ ಮೇಲ್ಛಾವಣಿ ಶೀಟ್‌ಗಳು ಹಾರಿಹೋಗಿದ್ದರಿಂದ ಮಳೆಯ ನೀರು ಮನೆಗೆ ನುಗ್ಗಿ ರಾಗಿ, ಬತ್ತ ಮತ್ತು ಇತರ ಧಾನ್ಯಗಳು, ಆಹಾರ ಪದಾರ್ಥಗಳು ಹಾಳಾಗಿವೆ. ಮರಗಳು ಮತ್ತು ವಿದ್ಯುತ್ ಕಂಬಗಳು ಗಾಳಿಯ ರಭಸಕ್ಕೆ ಉರುಳಿರುವುದರಿಂದ ಗ್ರಾಮಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.