ಆಯುರ್ವೇದ ಮಂಡಳಿಗೆ ಹೆಚ್ಚಿನ ಅಧಿಕಾರ: ಸಚಿವ ಖಾದರ್

ಬೆಂಗಳೂರು: ರಾಜ್ಯ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಗೆ ಹೆಚ್ಚಿನ ಅಧಿಕಾರ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದರು.
ವೈದ್ಯ ಮಂಡಳಿಯಿಂದ ವಿಕಾಸಸೌಧದಲ್ಲಿ ಆಯೋಜಿಸಿದ್ದ ವಿವಿಧ ರಾಜ್ಯಗಳ ಭಾರತೀಯ ವೈದ್ಯ ಪದ್ಧತಿಗಳ ಮಂಡಳಿ/ಕೌನ್ಸಿಲ್ ಅಧ್ಯಕ್ಷರು ಹಾಗೂ ನೋಂದಣಾಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.
ಬೇರೆ ರಾಜ್ಯಗಳಲ್ಲಿ ಮಂಡಳಿಗೆ ನೀಡಿರುವ ಅಧಿಕಾರದ ಬಗ್ಗೆ ಪರಿಶೀಲಿಸಲಾಗುವುದು. ವೈದ್ಯರನ್ನು ನಿಯಂತ್ರಿಸುವ, ಗುರುತಿನ ಚೀಟಿ ನೀಡುವ ಅಧಿಕಾರ ಹೆಚ್ಚಿಸುವ ಬಗ್ಗೆ ಚರ್ಚಿಸಲಾಗುವುದು. ರಾಜ್ಯದಲ್ಲಿ ನಕಲಿ ವೈದ್ಯರು ಹೆಚ್ಚಿದ್ದು, ಬೇರೆ ರಾಜ್ಯಗಳಿಂದಲೂ ಬರುತ್ತಿದ್ದಾರೆ.
ಬೇರೆ ರಾಜ್ಯಗಳ ಪ್ರಮಾಣ ಪತ್ರಗಳ ಬಗ್ಗೆ ರಾಜ್ಯದಲ್ಲಿ ಮಾಹಿತಿ ಇರುವುದಿಲ್ಲ. ಹೀಗಾಗಿ ನಕಲಿ ವೈದ್ಯರನ್ನು ಗುರುತಿಸುವುದು ಕಷ್ಟವಾಗಿದೆ. ರಾಜಕಾರಣಿಗಳು ಗ್ರಾಮಮಟ್ಟದಲ್ಲಿರುವ ಜನಪ್ರತಿನಿಧಿಗಳೂ ನಕಲಿ ವೈದ್ಯರಿಗೆ ಬೆಂಬಲವಾಗಿ ನಿಲ್ಲುತ್ತಾರೆ ಎಂದರು.
ಇದೇ ವೇಳೆ ಮಂಡಳಿಯ ಸದಸ್ಯ ವೈದ್ಯರನ್ನು ಗುರುತಿಸಲು ಡಿಜಿಟಲೀಕರಣಗೊಳಿಸಿದ ಸ್ಮಾರ್ಟ್ಕಾರ್ಡ್ ಬಿಡುಗಡೆ ಮಾಡಲಾಯಿತು. ಆಯುಷ್ ಇಲಾಖೆ ನಿರ್ದೇಶಕ ವಿಜಯ ಕುಮಾರ್ ಗೋಗಿ, ಮಂಡಳಿ ಅಧ್ಯಕ್ಷ ಡಾ.ಸತ್ಯಮೂರ್ತಿ ಭಟ್, ನೋಂದಣಾಧಿಕಾರಿ ಡಾ.ತಿಮ್ಮಪ್ಪ ಶೆಟ್ಟಿಗಾರ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


