ಪ್ರಧಾನ ಸುದ್ದಿ

'ಕೆಪಿಎಸ್ಸಿ ನೇಮಕಾತಿ ರದ್ದು' ನಿರ್ಧಾರದಲ್ಲಿ ಬದಲಾಣೆ ಇಲ್ಲ: ಸಿಎಂ

'ಕೆಪಿಎಸ್ಸಿ ನೇಮಕಾತಿ ರದ್ದು' ನಿರ್ಧಾರದಲ್ಲಿ ಬದಲಾಣೆ ಇಲ್ಲ: ಸಿಎಂ
Published On :

ಬೆಂಗಳೂರು: 2011ನೇ ಸಾಲಿನ ಕೆಪಿಎಸ್ಸಿ ನೇಮಕಾತಿಯನ್ನು ರದ್ದುಗೊಳಿಸಿರುವ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಸಂಪುಟದ ನಿರ್ಧಾರವನ್ನು ಬದಲಿಸುವುದಿಲ್ಲ ಎಂದು ಶನಿವಾರ ಹೇಳಿದ್ದಾರೆ.

ಈ ಕುರಿತು ಇಂದು ವರದಿಗಾರರೊಂದಿಗೆ ಮಾತನಾಡಿದ ಸಿಎಂ, ನೇಮಕಾತಿ ರದ್ದು ನಿರ್ಧಾರ ಯಾವುದೇ ಆತುರದ ನಿರ್ಧಾರ ಅಲ್ಲ. ನೇಮಕಾತಿಯಲ್ಲಿ ಬಾರಿ ಅಕ್ರಮ ನಡೆದಿದೆ. ಇದೇಲ್ಲವನ್ನು ಪರಿಶೀಲಿಸಿಯೇ ಸಚಿವ ಸಂಪುಟ ಈ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಸಂಪುಟದ ತೀರ್ಮಾನವನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡಾ. ಮೈತ್ರಿಗೆ ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಬಂದಿತ್ತು. ಆದರೆ ಸಂದರ್ಶನದಲ್ಲಿ ಅವರಿಗೆ ಕಡಿಮೆ ಅಂಕ ನೀಡಲಾಗಿದೆ. ಇದೇ 1,043ಮಂದಿ ಒಂದೇ ರೀತಿಯ ಅಂಕ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಇನ್ನು ಆಯ್ಕೆಯಾದ ಅಭ್ಯರ್ಥಿಗಳ ಪರ ಹೋರಾಟಕ್ಕೆ ನಿಂತಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಚರ್ಚೆಗೆ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಯಾವುದೇ ವೇದಿಕೆಯಲ್ಲೂ ಚರ್ಚೆ ಬರಲು ತಾವು ಸಿದ್ಧ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.