ಕೆಪಿಎಸ್ಸಿ ಎಲ್ಲಾ ಸದಸ್ಯರ ವಿರುದ್ಧ ತನಿಖೆ?

ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮ ಸಂಬಂಧ ಕೆಪಿಎಸ್ಸಿಯ ಎಲ್ಲಾ 9 ಸದಸ್ಯರ ವಿರುದ್ಧವೂ ತನಿಖೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತು ಇಂದು ವಿಧಾನಸೌಧದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು, 2011ರ ನೇಮಕಾತಿ ಅಕ್ರಮ ಸಂಬಂಧ ಕೆಪಿಎಸ್ಸಿಯ ಎಲ್ಲಾ ಸದಸ್ಯರ ವಿರುದ್ಧ ತನಿಖೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸದ್ಯ ಪ್ರಕರಣದ ಪ್ರಮುಖ ಆರೋಪಿ ಸ್ಥಾನದಲ್ಲಿರುವ ಕೆಪಿಎಸ್ಸಿ ಸದಸ್ಯೆ ಮಂಗಳಾ ಶ್ರೀಧರ್ ಅವರ ವಿರುದ್ಧ ಮಾತ್ರ ತನಿಖೆ ನಡೆಸಲಾಗಿದೆ. ಆದರೆ ಇನ್ನುಳಿದ ಸದಸ್ಯರ ಬಗ್ಗೆಯೂ ತನಿಖೆ ನಡೆಸುವ ಚಿಂತನೆ ನಡೆಸಲಾಗುತ್ತಿದೆ ಎಂದರು.
2011ನೇ ಸಾಲಿನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ವೇಳೆ ಎನ್.ರಾಮಕೃಷ್ಣ, ಬಿ.ಎಸ್.ಕೃಷ್ಣಪ್ರಸಾದ್, ಎಂ.ಮಹದೇವ್, ಎಚ್.ಡಿ.ಪಾಟೀಲ್, ಎಸ್.ಆರ್. ರಂಗಮೂರ್ತಿ, ಎಸ್.ದಯಾಶಂಕರ್, ಡಿ.ಪಿ.ಕನ್ನೀರಾಮ್, ಎಚ್.ವಿ.ಪಾರ್ಶ್ವನಾಥ್ ಹಾಗೂ ಮಂಗಳಾ ಶ್ರೀಧರ್ ಅವರು ಆಯೋಗದ ಸದಸ್ಯರಾಗಿದ್ದರು. ಪ್ರಕರಣ ಸಂಬಂಧ ಮಂಗಳಾ ಶ್ರೀಧರ್ ಅವರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


