ಸಂಪುಟ ವಿಸ್ತರಣೆಗೆ ಮತ್ತೆ ಕೂಡಿದ ಕಾಲ

ಮೈಸೂರು: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಕಾಲ ಕೂಡಿಬಂದಿದೆ.
ವಿಧಾನ ಮಂಡಲ ಅಧಿವೇಶನ, ಉಪಚುನಾವಣೆ ಮತ್ತಿತ್ತರ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಪ್ರಕ್ರಿಯೆಗೆ ಮತ್ತೆ ಚುರುಕು ನೀಡಲು ನಿರ್ಧರಿಸಲಾಗಿದೆ. ಈ ಸಭೆಗೆ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯಸಿಂಗ್ ಆಗಮಿಸಲಿದ್ದಾರೆ. ಆವರ ನೇತೃತ್ವ ಚರ್ಚೆ ನಡೆಯಲಿದ್ದು, ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿ ಮಾಡುವುದು ಖಚಿತ. ಆದರೆ ಖಾತೆಗಳ ಮರುಹಂಚಿಕೆ ಸೇರಿದಂತೆ ಮತ್ತಿತ್ತರ ವಿಷಯಗಳ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಇದೇ ಸಂದರ್ಭದಲ್ಲಿ ನಿಗಮ, ಮಂಡಳಿಗಳಿಗೂ ನೇಮಕಾತಿ ಪ್ರಕ್ರಿಯೆ ಆಗಬೇಕಿದೆ. ಸಭೆಯಲ್ಲಿ ಈ ಬಗ್ಗೆಯೂ ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಸಂಪುಟದಿಂದ ಕೆಲವರನ್ನು ಕೈಬಿಡಲಾಗುವುದು ಎಂಬುದು ವದಂತಿ ಅಷ್ಟೆ. ಇದರಲ್ಲಿ ಯಾವುದೇ ಹುರುಳಿಲ್ಲ. ಯಾರನ್ನೂ ಕೈಬಿಡುವ ಬಗ್ಗೆ ಚಿಂತನೆ ನಡೆಸಿಲ್ಲ ಎರ್ದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ನಿರ್ದೇಶನ ಇಲ್ಲ: ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಸಭೆಗಳಿಗೆ ಹೋಗಬೇಡಿ ಎಂದು ಹೈಕಮಾಂಡ್ನಿಂದ ನನಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


