ಪ್ರಧಾನ ಸುದ್ದಿ

ಪಂಚಭೂತಗಳಲ್ಲಿ 'ಅನಂತ' ಲೀನ

ಪಂಚಭೂತಗಳಲ್ಲಿ 'ಅನಂತ' ಲೀನ
Published On :

ಬೆಂಗಳೂರು: ನಿನ್ನೆ ನಿಧನರಾಗಿದ್ದ ಜ್ಞಾನಪೀಠ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಇಂದು ಸಂಜೆ ಪಂಚಭೂತಗಳಲ್ಲಿ ಲೀನವಾದರು.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ
ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ 'ಅನಂತ'ನ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮಾಧ್ವ ಸಂಪ್ರದಾಯದಂತೆ ವೇದಘೋಷಗಳನ್ನು ಪಠಿಸುವ ಮೂಲಕ ಅನಂತಮೂರ್ತಿಯವರ ಚಿತೆಗೆ ಪುತ್ರ ಶರತ್ ಅಗ್ನಿ ಸ್ಪರ್ಶ ಮಾಡಿದರು.

ವಿಧಿವಿಧಾನಕ್ಕೂ ಮುನ್ನ ಅಗಲಿದ ಚೇತನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಅಂಬರೀಶ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಶಾಸಕ ಮುನಿರತ್ನ, ಯು.ಟಿ. ಖಾದರ್. ಸಚಿವೆ ಉಮಾಶ್ರೀ ಡಾ. ಮಹದೇವಪ್ಪ ಅವರು ಅಂತಿಮ ನಮನ ಸಲ್ಲಿಸಿದರು.

ಅನಂತಮೂರ್ತಿಯವರಿಗೆ ಪೊಲೀಸ್ ಬ್ಯಾಂಡ್ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಗಾಳಿಯಲ್ಲಿ ಕುಶಾಲತೋಪು ಹಾರಿಸಿ ಮೂಲಕ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಬಳಿಕ 2 ನಿಮಿಷ ಮೌನಾಚರಣೆ ಮೂಲಕ ಅನಂತಮೂರ್ತಿಯವರ ಆತ್ಮಕ್ಕೆ ಶಾಂತಿ ಕೋರಲಾಯಿತು.

ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಸಮಾಧಿ ಇರುವ ಕಲಾಗ್ರಾಮದಲ್ಲಿ ಸಂಜೆ  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನವನ್ನು ನಡೆಸಲಾಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.