ಪ್ರಧಾನ ಸುದ್ದಿ

ಸಂಭ್ರಮಿಸಿದವರ ವಿರುದ್ಧ ಕಾನೂನು ಕ್ರಮ

ಸಂಭ್ರಮಿಸಿದವರ ವಿರುದ್ಧ ಕಾನೂನು ಕ್ರಮ
Published On :

ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ನಿಧನ ಸುದ್ದಿ ತಿಳಿದು ಪಟಾಕಿ ಸಿಡಿಸಿ ಸಂಭ್ರಮಿಸಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನುಷ್ಯತ್ವ ಇಲ್ಲದವರು, ವಿಕೃತ ಮನಸ್ಸಿನವರು ಈ ರೀತಿ ಸಂಭ್ರಮ ಆಚರಿಸುತ್ತಾರೆ. ಅಂತಹವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚಿಸಲಾಗಿದೆ. ಅನಂತಮೂರ್ತಿ ಅವರ ಮನೆಯನ್ನು ಮ್ಯೂಸಿಯಂ ಮಾಡುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

6 ಮಂದಿ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು
ಮಂಗಳೂರು:
ಡಾ.ಯು.ಆರ್.ಅನಂತಮೂರ್ತಿ ನಿಧನ ಸಂದರ್ಭ ಕದ್ರಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದ ಆರು ಮಂದಿ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲಾಗಿದೆ. ಕದ್ರಿ ಮಲ್ಲಿಕಟ್ಟೆಯಲ್ಲಿ 5-6 ಮಂದಿ ಕಿಡಿಗೇಡಿಗಳು ಏಕಾಏಕಿ ರಸ್ತೆ ಮಧ್ಯೆ ಪಟಾಕಿ ಸಿಡಿಸಿ, ಸಾರ್ವಜನಿಕರ ಶಾಂತಿ ಭಂಗ ಮಾಡಿದ್ದಾರೆ ಎಂದು ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ. 149 ಎಲ್‌ಪಿಸಿ 290 ಎಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಯಾರು ಎನ್ನವುದು ಪತ್ತೆಯಾಗಿಲ್ಲ. ಆದರೆ ವಿವರ ಪಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಪುಸ್ತಕ ರೂಪದಲ್ಲಿ ಕೊನೆ ಭಾಷಣ
ತುಮಕೂರು:
ಡಾ.ಯು.ಆರ್.ಅನಂತಮೂರ್ತಿ ಮಾಡಿದ ಕೊನೆಯ ಭಾಷಣ ಪುಸ್ತಕ ರೂಪದಲ್ಲಿ ಪ್ರಕಟವಾಗುತ್ತಿದೆ. ತುಮಕೂರು ವಿವಿಯಲ್ಲಿ ನಡೆದ ಡಾ.ಯು.ಆರ್.ಅನಂತಮೂರ್ತಿ ನೆನಪು ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಎ.ಎಚ್. ರಾಜಾಸಾಬ್ ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.