ಪ್ರಧಾನ ಸುದ್ದಿ

ಶೀಘ್ರವೇ ಸಂಪುಟ ವಿಸ್ತರಣೆ: ಸಿಎಂ

ಶೀಘ್ರವೇ ಸಂಪುಟ ವಿಸ್ತರಣೆ: ಸಿಎಂ
Published On :

ಬೆಂಗಳೂರು: ಶೀಘ್ರವೇ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜನ ಸರ್ಕಾರದ ಮೇಲೆ ನಂಬಿಕೆ ಇಟ್ಟು ನಮಗೆ ಮತ ಹಾಕಿದ್ದಾರೆ. ಈ ಉಪ ಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಜನ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದರು. ಅಲ್ಲದೆ ಬಳ್ಳಾರಿಯಲ್ಲಿ
ನಮ್ಮ ನಿರೀಕ್ಷೆಗೂ ಮೀರಿ ಉತ್ತಮ ಫಲಿತಾಂಶ ಬಂದಿದೆ. ಲೋಕಸಭೆ ಮತ್ತು ವಿಧಾಸಭೆ ಚುನಾವಣೆಯಲ್ಲಿ ಜನರು ಬೇರೆ-ಬೇರೆ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಹೇಳಿದರು.

ಇದೇ ವೇಳೆ ಸಂಪುಟ ಪುನಾರಚನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸಂಪುಟ ಪುನಾರಚನೆ ಮಾಡುವುದಿಲ್ಲ. ಆದರೆ ಸಂಪುಟ ವಿಸ್ತರಣೆ ಮಾಡುತ್ತೇವೆ. ಸದ್ಯ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಇನ್ನು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇದು ಹಾದಿ, ಬೀದಿಯಲ್ಲಿ ಚರ್ಚಿಸುವಂತಹ ವಿಷಯ ಅಲ್ಲ. ಈ ಕುರಿತು ಹೈಕಮಾಂಡ್‌ನೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಈ ಮಧ್ಯೆ ಸಂಪುಟ ವಿಸ್ತರಣೆಯ ಸುಳಿವು ಸಿಗುತ್ತಿದ್ದಂತೆ ಸಚಿವ ಆಕಾಂಕ್ಷಿಗಳ ಸಿಎಂ ಮೇಲೆ ಹಾಕಲು ಆರಂಭಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾ ಎದುರು ಜಮಾಯಿಸಿರುವ ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಅವರ ಬೆಂಬಲಿಗರು, ಖಂಡ್ರೆಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.