ರಾಜ್ಯದ ಹಲವು ಕಡೆ ಲೋಕಾ ದಾಳಿ, ಭ್ರಷ್ಟರಿಗೆ ಬಿಸಿ

ಬೆಂಗಳೂರು: ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆಯೇ ಏಕಕಾಲಕ್ಕೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಅಕ್ರಮ ಆಸ್ತಿ ಗಳಿಗೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಕೋಲಾರ, ಮೈಸೂರು, ಶಿವಮೊಗ್ಗ, ಗುಲ್ಬರ್ಗಾ ಹಾಗೂ ಯಾದಗಿರಿ ಜಿಲ್ಲೆಯ ಐವರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಅಮರೇಶ್ ಬಾರಕೇರ್ ನೇತೃತ್ವದಲ್ಲಿ ಬೆಂಗಳೂರಿನ ಬಸವೇಶ್ವರ ಲೇಔಟ್ನಲ್ಲಿರುವ ನಗರಾಭಿವೃದ್ಧಿ ಇಲಾಖೆ ಎಇಇ ಸೀತಾರಾಮ್ ಅವರ ನಿವಾಸ ಹಾಗೂ ಹಲಸೂರು ಗೇಟ್ ಬಳಿ ಇರುವ ಕಚೇರಿಯ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಮೈಸೂರಿನಲ್ಲಿ ಲೋಕಾಯುಕ್ತ ಎಸ್ಪಿ ಜಗದೀಶ್ ಪ್ರಸಾದ್ ಅವರ ನೇತೃತ್ವದಲ್ಲಿ ಮಕ್ಕಳ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ಅಕ್ರಮ ಆಸ್ತಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಕೋಲಾರ ನಗರ ಸಭೆ ಆಯುಕ್ತ ಜಗದೀಶ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಎಸ್ಪಿ ಸುಬ್ರಮಣಿ ಅವರ ನೇತೃತ್ವದ ತಂಡ, ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


