ಪ್ರಧಾನ ಸುದ್ದಿ

ವೇಶ್ಯಾವಾಟಿಕೆ ಕಾನೂನು ಬದ್ಧಗೊಳಿಸಿ: ನಿಸಾರ್, ಜನ ದಂಗೆ ಏಳುತ್ತಾರೆ: ಬೇಗ್

ವೇಶ್ಯಾವಾಟಿಕೆ ಕಾನೂನು ಬದ್ಧಗೊಳಿಸಿ: ನಿಸಾರ್, ಜನ ದಂಗೆ ಏಳುತ್ತಾರೆ: ಬೇಗ್
Published On :

ಬೆಂಗಳೂರು: ವೇಶ್ಯಾವಾಟಿಕೆಯನ್ನು ಕಾನೂನು ಬದ್ಧಗೊಳಿಸಿದರೆ ಅತ್ಯಾಚಾರಗಳು ನಿಲ್ಲುತ್ತವೆ ಎಂಬ ಹಿರಿಯ ಸಾಹಿತಿ ನಾಡೋಜ ಕೆ.ಎಸ್.ನಿಸಾರ್ ಅಹಮದ್ ಅವರ ಸಲಹೆಗೆ, ಹೀಗೇನಾದರೂ ಮಾಡಿದರೆ ಜನ ದಂಗೆ ಏಳುತ್ತಾರೆ, ಅಪಾಯ ಎದುರಿಸಬೇಕಾಗುತ್ತದೆ ಎಂದು ವಾರ್ತಾ ಸಚಿವ ರೋಷನ್‌ಬೇಗ್ ಅವರು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿಲ್ಲ ಎನ್ನುವ ಹಾಗಿಲ್ಲ. ಎಲ್ಲೆಡೆಯಂತೆ ಇಲ್ಲಿಯೂ ವೇಶ್ಯಾವಾಟಿಕೆ ಅಕ್ರಮವಾಗಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇದನ್ನು ಕಾನುನು ಬದ್ಧಗೊಳಿಸಿ ಅದರಲ್ಲಿ ತೊಡಗಿಸಿಕೊಂಡವರಿಗೆ ಪ್ರತ್ಯೇಕ ಜಾಗ ನೀಡಿದರೆ, ಅಕ್ರಮ ಚಟುವಟಿಕೆಗಳು ನಿಲ್ಲಬಹುದು. ಜೊತೆಗೆ ಅತ್ಯಾಚಾರದಂತಹ ಅಮಾನವೀಯ ಕೃತ್ಯಗಳು ನಿಲ್ಲುತ್ತವೆ ಎಂದು ನಿಸಾರ್ ಅಹಮದ್ ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಲು ಸಾಧ್ಯವಿಲ್ಲ. ಹಾಗೇನಾದರೂ ಮಾಡಿದರೆ ಜನ ದಂಗೆ ಏಳುತ್ತಾರೆ ಎನ್ನುಲ ಮೂಲಕ ನಿಸಾರ್ ಅಹಮದ್ ಹೇಳಿಕೆಗೆ ರೋಷನ್‌ಬೇಗ್ ತಣ್ಣಗೆ ತಿರುಗೇಟು ನೀಡಿದರು. ಅಷ್ಟೇ ಅಲ್ಲ, ಮಲೇಷ್ಯಾ, ಥಾಯ್ಲೆಂಡ್ ಸೇರಿದಂತೆ ಅನೇಕ ದೇಶಗಳಲ್ಲಿ ವೇಶ್ಯಾವಾಟಿಕೆ ಕಾನೂನುಬದ್ಧವಾಗಿದೆ. ಈ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಪ್ರತಿ ವರ್ಷ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಹಾಗಾಗಿ ಅಲ್ಲಿ ಮಾರಕ ಕಾಯಿಲೆಗಳಿಗೆ ತುತ್ತಾಗುವವರ ಸಂಖ್ಯೆ ಕಡಿಮೆಯಿದೆ. ಆದರೆ ನಾವಿನ್ನೂ ಸಂಪ್ರದಾಯದ ಚೌಕಟ್ಟಿನಲ್ಲಿದ್ದೇವೆ. ಹಾಗಾಗಿ ಇಲ್ಲಿ ವೇಶ್ಯಾವಾಟಿಕೆಯನ್ನು ಕಾನೂನು ಬದ್ಧಗೊಳಿಸಿಲು ಹೊರಟರೆ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಚಿತ್ರಕಲಾ ಪರಿಷತ್ತಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಛಾಯಾಗ್ರಹಕ ಸುಧಾಕರ ಶೆಟ್ಟಿ ಅವರ ಛಾಯಾಚಿತ್ರಗಳ ಪ್ರದರ್ಶನದ ಉದ್ಘಾಟನಾ ಸಂದರ್ಭದಲ್ಲಿ ಇಬ್ಬರು ಗಣ್ಯರು ಹೀಗೆ ತಮ್ಮದೇ ಅಭಿಪ್ರಾಯಗಳನ್ನು ಮಂಡಿಸಿ ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.