
ನವದೆಹಲಿ: ಯೋಜನಾ ಆಯೋಗದ ಪುನರ್ ವಿನ್ಯಾಸದ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತ ಪಡಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.
ಯೋಜನಾ ಆಯೋಗದ ಪುನರ್ ವಿನ್ಯಾಸದ ಬಗ್ಗೆ ಅಲ್ಲ್ಲಿರುವ ತಜ್ಞರು ಮತ್ತು ಆರ್ಥಿಕ ತಜ್ಞರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಿಯಾಗಿದೆ ಎಂದು ಶುಕ್ರವಾರ ಮೋದಿ ಲೋಕ ಸಭೆಯಲ್ಲಿ ಹೇಳಿದ್ದರು. ಈ ವಿಷಯದ ಬಗ್ಗೆ ಚರ್ಚಿಸುವುದಕ್ಕಾಗಿಯೇ ಮೋದಿ ಇಂದು ಮುಖ್ಯಮಂತ್ರಿಗಳ ಸಭೆ ಕರೆದಿದ್ದರು.
ಆದಾಗ್ಯೂ, ಭಾರತೀಯ ಜನತಾ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಮನಸ್ತಾಪಗಳೇರ್ಪಟ್ಟಿರುವುದರಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಸಭೆಗೆ ಗೈರು ಹಾಜರಾಗುವ ಸಾಧ್ಯತೆ ದಟ್ಟವಾಗಿದೆ ಆದ್ದರಿಂದ ಪ್ರಸ್ತುತ ಸಭೆಯಲ್ಲಿ ಭಾಗವಹಿಸಲು ಮಮತಾ ಪ.ಬಂಗಾಳದ ವಿತ್ತ ಸಚಿವ ಅಮಿತ್ ಮಿತ್ರಾ ಅವರನ್ನು ಕಳುಹಿಸುವ ಸಾಧ್ಯತೆ ಇದೆ.
ಇತ್ತ, ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಕಾರಣ ಅಲ್ಲಿನ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಕೂಡಾ ಈ ಸಭೆಗೆ ಗೈರು ಹಾಜರಾಗಲಿದ್ದಾರೆ .
Advertisement