ಪ್ರಧಾನ ಸುದ್ದಿ

ಪಕ್ಷಗಳು ಮತಬ್ಯಾಂಕ್ ರಾಜಕಾರಣ ಮಾಡುತ್ತಿವೆ: ಗಡ್ಕರಿ

ದೇಶದಲ್ಲಿ ಮತಾಂತರ ವಿವಾದ ಭಾರೀ ಚರ್ಚೆಗೀಡಾಗುತ್ತಿರುವ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ...

ಪಕ್ಷಗಳು ಮತಬ್ಯಾಂಕ್ ರಾಜಕಾರಣ ಮಾಡುತ್ತಿವೆ: ಗಡ್ಕರಿ
ನಿತಿನ್ ಗಡ್ಕರಿ
Published On :

ನವದೆಹಲಿ: ದೇಶದಲ್ಲಿ ಮತಾಂತರ ವಿವಾದ ಭಾರೀ ಚರ್ಚೆಗೀಡಾಗುತ್ತಿರುವ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿಯ ಗೆಲುವಿನಿಂದಾಗಿ ಇತರ ಪಕ್ಷಗಳಿಗೆ ಅಸೂಯೆ ಹುಟ್ಟಿದೆ. ಅಂಥಾ ಪಕ್ಷಗಳು ಮತ ಬ್ಯಾಂಕ್ ರಾಜಕಾರಣ ನಡೆಸುವ ಮೂಲಕ ಅಭಿವೃದ್ಧಿಗೆ ತಡೆಯೊಡ್ಡುತ್ತಿವೆ ಎಂದಿದ್ದಾರೆ.

ಇದು ಪಕ್ಷದೊಳಗಿರುವ ಸಮಸ್ಯೆ ಅಲ್ಲ, ಆದರೆ ಕೆಲವೊಂದು ರಾಜಕೀಯ ಪಕ್ಷಗಳು ಮತ್ತು ನಾಯಕರಿಗೆ ಬಿಜೆಪಿಯ ಗೆಲುವಿನಿಂದ ಅಸೂಯೆ ಹುಟ್ಟಿಕೊಂಡಿದೆ ಎಂದು ಗಡ್ಕರಿ ಹೇಳಿದ್ದಾರೆ.

ಇನ್ನು, ಮತ ಬ್ಯಾಂಕ್ ಬಗ್ಗೆ ಹೇಳುವುದಾದರೆ ಅದೆಲ್ಲ ಅವರ ನಿತ್ಯ ಕಾಯಕ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆಯಿಲ್ಲ. ಅವರಿಗೇನಿದ್ದರೂ ಸರ್ಕಾರದ ಒಳ್ಳೆಯ ಉದ್ದೇಶಗಳು ಕಾಣಲ್ಲ. ಅಭಿವೃದ್ಧಿಯನ್ನೇ ಮತ ಬ್ಯಾಂಕ್ ಆಗಿ ಪರಿವರ್ತಿಸಲು ಹೊರಟಿರುವವರು ಅವರು ಸಚಿವರು ಇತರ ರಾಜಕೀಯ ಪಕ್ಷಗಳನ್ನುದ್ದೇಶಿಸಿ ಹೇಳಿದ್ದಾರೆ.

ಸಂಸತ್‌ನಲ್ಲಿ ಮತಾಂತರ ವಿವಾದದ ಬಗ್ಗೆ ಚರ್ಚೆಯಾಗುತ್ತಿದ್ದ ವೇಳೆ ಉತ್ತರಿಸಿದ ಗಡ್ಕರಿ ಇದೆಲ್ಲ ಮತ ಬ್ಯಾಂಕ್ ರಾಜಕಾರಣ ಬೇರೇನೂ ಅಲ್ಲ ಎಂದಿದ್ದಾರೆ.

ಅದೇ ವೇಳೆ ಪ್ರಧಾನಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದರ ಬಗ್ಗೆ ನೀವೇನಂತೀರಿ? ಎಂದು ಕೇಳಿದಾಗ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ತಕ್ಕ ಸಮಯದಲ್ಲಿ ಸರಿಯಾದ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಉತ್ತರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.