

ನವದೆಹಲಿ: ಜಾರ್ಖಂಡ್ ಹಾಗೂ ಜಮ್ಮು ಮತ್ತು ಕಾಶ್ಮೀರ ಎರಡು ರಾಜ್ಯದಲ್ಲೂ ಭಾರತೀಯ ಜನತಾ ಪಕ್ಷ(ಬಿಜೆಪಿ) ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಬಗ್ಗೆ ಸಂಸತ್ ಭವನದ ಹೊರಗಡೆ ವರದಿಗಾರರಿಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಜಾರ್ಖಂಡ್ ಮತ್ತು ಕಾಶ್ಮೀರ ಎರಡು ರಾಜ್ಯಗಳಲ್ಲೂ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್‌ನಲ್ಲಿ ಪಕ್ಷ ಮುನ್ನಡೆ ಸಾಧಿಸುತ್ತಿದ್ದಂತೆ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದು, ಜಾರ್ಖಂಡ್‌ನಲ್ಲಿ ಸ್ವಂತ ಬಲದ ಮೇಲೆ ಹಾಗೂ ಕಾಶ್ಮೀರದಲ್ಲಿ ಪಿಡಿಪಿ ಬೆಂಬಲದೊಂದಿಗೆ ಸರ್ಕಾರ ರಚಿಸುವ ಮುನ್ಸೂಚನೆ ನೀಡಿದ್ದಾರೆ.