ಯು.ಟಿ ಖಾದರ್
ಯು.ಟಿ ಖಾದರ್

ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್ ಪಾಸ್

ಎಂಡೋಸಲ್ಫಾನ್ ಸಂತ್ರಸ್ತರಿಗೆ ಮತ್ತು ಅವರ ರೋಗಿಗಳ ಉಸ್ತುವಾರಿ ವಹಿಸಿರುವ ಬಂಧುಗಳಲ್ಲೊಬ್ಬರಿಗೆ ಉಚಿತ ಬಸ್ ಪಾಸ್ ನೀಡಲು...

ಕಾರವಾರ: ಎಂಡೋಸಲ್ಫಾನ್ ಸಂತ್ರಸ್ತರಿಗೆ ಮತ್ತು ಅವರ ರೋಗಿಗಳ ಉಸ್ತುವಾರಿ ವಹಿಸಿರುವ ಬಂಧುಗಳಲ್ಲೊಬ್ಬರಿಗೆ ಉಚಿತ ಬಸ್ ಪಾಸ್ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಎಂಡೋ ಸಂತ್ರಸ್ತರು ಚಿಕಿತ್ಸೆಗಾಗಿ ಆಗಾಗ್ಗೆ ಬಸ್ ನಲ್ಲಿ ಸಂಚರಿಸುವ ಕಷ್ಟವನ್ನು ಕಡಿಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 1,304 ಜನ ಎಂಡೋಸಲ್ಫಾನ್ ಸಂತ್ರಸ್ತರಿದ್ದಾರೆ.

ಹೈಕೋರ್ಟ್ ನಿರ್ದೇಶನದ ಮೇರೆಗೆ ಸರ್ಕಾರ ಎಂಡೋ ಸಂತ್ರಸ್ತರಿಗೆ ಈ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಎಂಡೋ ಪೀಡಿತ ವ್ಯಕ್ತಿ ಮತ್ತು ಆತನನ್ನು ನೋಡಿಕೊಳ್ಳುವ ಇನ್ನೊಬ್ಬ ವ್ಯಕ್ತಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಹೋಗಬೇಕಾದ ಸಂದರ್ಭ ಜಾಸ್ತಿಯೇ ಇರುವುದರಿಂದ ಅವರಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶಿಸಿತ್ತು.

ಅದೇ ವೇಳೆ,  ಎಂಡೋ ಸಂತ್ರಸ್ತರು ಆಸ್ಪತ್ರೆಗೆ ಹೋಗಬೇಕಾದರೆ ಅವರಿಗೆ ಉಚಿತ ಪ್ರಯಾಣ ಕಲ್ಪಿಸಬೇಕೆದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರಿಗೆ ಇಲಾಖೆಗೆ ಪತ್ರ ಬರೆದಿತ್ತು.

ಈ ಹಿನ್ನೆಲೆಯಲ್ಲಿ ಎಂಡೋ ಸಂತ್ರಸ್ತರಿಗೆ ಉಚಿತ ಪ್ರಯಾಣ ಕಲ್ಪಿಸುವಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಎನ್‌ಇಕೆಆರ್‌ಟಿಸಿ ಸಂಸ್ಥೆಗಳಿಗೆ ಸುತ್ತೋಲೆ ನೀಡಲಾಗಿತ್ತು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಎಂಡೋಸಲ್ಫಾನ್ ಸಂತ್ರಸ್ತರಿಗೆ ಈಗಾಗಲೇ ತಾವು ಉಚಿತ ಚಿಕಿತ್ಸೆ ನೀಡುತ್ತಿದ್ದು, ಅವರಿಗೆ ತಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com