ಬಾಂಬ್ ಸ್ಫೋಟ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ರದ್ದು

ಬಾಂಬ್ ಸ್ಫೋಟ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ರದ್ದು

ನವದೆಹಲಿ: ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯನ್ನು ರದ್ದುಗೊಳಿಸಲಾಗಿದೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ಜನವರಿ 17 ಮತ್ತು 18ರಂದು ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಲು ಮುಂದಾಗಿತ್ತು. ಆದರೆ ಭಾನುವಾರ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಪಕ್ಷ ರಾಷ್ಟ್ರೀಯ ಕಾರ್ಯಕಾರಣಿ ಸಭೆಯನ್ನು ರದ್ದುಗೊಳಿಸಿದೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ನಾಯಕರು ಈ ಕಾರ್ಯಕಾರಣಿಯಲ್ಲಿ ಭಾಗವಹಿಸಬೇಕಿತ್ತು. ಬೆಂಗಳೂರಿನಲ್ಲಿ ಈ ಹಿಂದೆ 2008, ಸೆಪ್ಟೆಂಬರ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com