
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ದಿನ ಯೋಜನಾ ಆಯೋಗದ ಬದಲು ಆಧುನಿಕ ಸಂಸ್ಥೆಯೊಂದನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು ಈ ಹಿನ್ನೆಲೆಯಲ್ಲಿ ಗುರುವಾರ ಕೇಂದ್ರ ಸರ್ಕಾರ ಯೋಜನಾ ಆಯೋಗವನ್ನು 'ನೀತಿ ಆಯೋಗ' ಎಂದು ಮರು ನಾಮಕರಣ ಮಾಡಿದೆ.
ದೇಶದ ಆರ್ಥಿಕತೆಗೆ ದಶಕಗಳಿಂದ ಮಾರ್ಗದರ್ಶನ ನೀಡುತ್ತಿದ್ದ ಯೋಜನಾ ಆಯೋಗದ ಮರು ನಾಮಕರಣ ಮಾಡಿರುವುದು ಸೃಜನಾತ್ಮಕವಾಗಿ ಯೋಚನೆ ಮಾಡುವ ಸಂಸ್ಥೆಯೊಂದನ್ನು ಹುಟ್ಟು ಹಾಕಲು ಕೇಂದ್ರ ಸರ್ಕಾರ ತೆಗೆದುಕೊಂಡ ಮೊದಲ ಕ್ರಮವಾಗಿದೆ.
ಯೋಜನಾ ಆಯೋಗದ ಜಾಗದಲ್ಲಿ ಹೊಸ ಸಂಸ್ಥೆಯೊಂದನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆದಿದ್ದರು. ಈ ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಮುಖ್ಯಮಂತ್ರಿಗಳು ಕೇಂದ್ರದ ನಿರ್ಧಾರದ ಪರವಾಗಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಯೋಜನಾ ಆಯೋಗವನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಿಪಡಿಸಿದ್ದರು.
Advertisement