ಪ್ರಧಾನ ಸುದ್ದಿ

ದಾಖಲೆ ಇಲ್ಲದ ರು. 54 ಲಕ್ಷ ನಗದು ವಶ, ಇಬ್ಬರ ಬಂಧನ

Published On :

ಹೊಸಪೇಟೆ: ಸೂಕ್ತ ದಾಖಲೆಗಳಿಲ್ಲದೆ ಖಾಸಗಿ ಬಸ್‌ನಲ್ಲಿ ಸಾಗಿಸುತ್ತಿದ್ದ 54 ಲಕ್ಷ ನಗದನ್ನು ವಶಪಡಿಸಿಕೊಂಡ ಹೊಸಪೇಟೆ ಪೊಲೀಸರು ಶನಿವಾರ ಬೆಳಗ್ಗೆ ಇಬ್ಬರನ್ನು ಬಂಧಿಸಿದ್ದಾರೆ.
ಹೈದರಾಬಾದ್‌ನಿಂದ ಶಿವಮೊಗ್ಗಕ್ಕೆ ಖಾಸಗಿ ಬಸ್‌ನಲ್ಲಿ ಹೊರಟಿದ್ದ ಉತ್ತರಪ್ರದೇಶ ಮೂಲದ ರಂಜನ್‌ಕುಮಾರ್ ಮತ್ತು ರಾಜಕುಮಾರ್ ಚಂದ್ರವಂಶಿ ಅವರು ಹಣ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಅವರಿಬ್ಬರನ್ನು ವಿಚಾರಿಸಿದಾಗ ಅದು ಅಕ್ರಮ ಹಣ ಎಂದು ತಿಳಿದಿದೆ. ರು. 54 ಲಕ್ಷ ವಶಪಡಿಸಿಕೊಂಡು, ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಅಷ್ಟೊಂದು ಹಣವನ್ನು ಯಾರಿಂದ ಯಾರಿಗೆ ಸಾಗಿಸುತ್ತಿದ್ದರು ಎಂಬ ಕುರಿತು ಸರಿಯಾದ ಮಾಹಿತಿ ಹೇಳದ ಕಾರಣ ಮತ್ತು ಹಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳಿಲ್ಲದ ಕಾರಣ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಹೊಸಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.