ಜಾಮೀನು ಸಿಗದಂತೆ ಅರ್ಜಿ
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ಅರಣ್ಯದಲ್ಲಿ ಜಿಂಕೆ ಕೊಂದ ಆರೋಪ ಹೊತ್ತ ಮೈಸೂರಿನ ಸಿಐಡಿ ಡಿವೈಎಸ್ಪಿ ಟಿ.ಕೆ.ಧರ್ಮೇಶ್ ಸೇರಿದಂತೆ 6 ಮಂದಿ ಜಿಂಕೆ ಹಂತಕರಿಗೆ ಜಾಮೀನು ಸಿಗದಂತೆ ಫೆ.3ರಂದು ನಂಜನಗೂಡಿನ ನ್ಯಾಯಾಲಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಕರಾರು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಓಂಕಾರ ಅರಣ್ಯದಲ್ಲಿ ಜಿಂಕೆ ಕೊಂದವರಲ್ಲಿ ಪ್ರಮುಖ ಆರೋಪಿ ಎಂದು ಹೇಳಲಾದ ಡಿವೈಎಸ್ಪಿ ಟಿ.ಕೆ.ಧರ್ಮೇಶ್ ಜಾಮೀನು ಪಡೆಯಬಾರದು ಎಂದು ಅರಣ್ಯ ಅಧಿಕಾರಿಗಳು ತಂತ್ರ ರೂಪಿಸಿದ್ದಾರೆ. ಜಾಮೀನು ಸಿಕ್ಕರೆ ಪ್ರಭಾವಿ ಅಧಿಕಾರಿಯಾಗಿರುವ ಜತೆಗೆ ಪ್ರಭಾವಿ ರಾಜಕಾರಣಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಹಾಯದಿಂದ ಕೇಸ್ ತಿರುವು ಮಾಡುವ ಸಾಧ್ಯತೆ ಇರುವ ಕಾರಣ ಫೆ.3ರಂದು ನಂಜನಗೂಡಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಹೆಡಿಯಾಲ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ತಕರಾರು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

