ಪ್ರಧಾನ ಸುದ್ದಿ

ಕೈ ಹಾಲಿ ಸಂಸದರಿಗೆ ಟಿಕೆಟ್

Published On :

ನವದೆಹಲಿ: ಒಂಬತ್ತು ಮಂದಿ ಹಾಲಿ ಸಂಸದರನ್ನೇ ಕಣಕ್ಕಿಳಿಸಲು ನಿರ್ಧರಿಸಿರುವ ಕಾಂಗ್ರೆಸ್, ಉಳಿದ 19 ಕ್ಷೇತ್ರಗಳ ಉಮೇದುವಾರರನ್ನು ಫೆ.17ರ ನಂತರ ಪ್ರಕಟಿಸಲಿದೆ. ಈ ಪೈಕಿ ಬೆಂಗಳೂರು ಉತ್ತರ ಮತ್ತು ಮಂಗಳೂರು ಲೋಕಸಭಾ ಕ್ಷೇತ್ರಗಳಿಗೆ ಆಂತರಿಕ ಚುನಾವಣೆ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ಉಳಿದ 17 ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಕರ್ನಾಟಕ ಚುನಾವಣಾ ಪರಿಶೀಲನಾ ಸಮಿತಿ (ಸ್ಕ್ರೀನಿಂಗ್ ಕಮಿಟಿ) ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸಿದೆ.        
ಆದರೆ, ಔಪಚಾರಿಕವಾಗಿ ಈ ಕ್ಷೇತ್ರದಿಂದಲೂ ಎರಡು ಹೆಸರುಗಳನ್ನು ಸಲ್ಲಿಸಲಾಗಿದೆ. ಚುನಾವಣಾ ಸಮಿತಿಗೆ ಸಲ್ಲಿಸಿರುವ ಪಟ್ಟಿಯಲ್ಲಿ ಕೆಲ ಕ್ಷೇತ್ರಗಳಿಗೆ ಒಬ್ಬರ ಹೆಸರು, ಮತ್ತೆ ಕೆಲ ಕ್ಷೇತ್ರಗಳಿಗೆ ಎರಡು ಮೂರು ಹೆಸರುಗಳನ್ನು ಸೂಚಿಸಲಾಗಿದೆ.
ಚುನಾವಣೆಯಲ್ಲಿ ಗೆಲ್ಲುವುದೇ ಪ್ರಮುಖ ಮಾನದಂಡವನ್ನಾಗಿ ಪರಿಗಣಿಸಿದ್ದು ಉಳಿದ ನಿಯಮಗಳನ್ನು ಸಡಿಲಿಸಲಾಗಿದೆ. ಹಾಲಿ ಸಚಿವರು ಹಾಗೂ ಶಾಸಕರ್ಯಾರನ್ನು ಕಣಕ್ಕಿಳಿಸುವುದಿಲ್ಲ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಹೆಸರು ಪ್ರಸ್ತಾಪವಾಗಿದ್ದರೂ ಅವರು ಸ್ಪರ್ಧಿಸುವುದಿಲ್ಲ.
ಹರಿಪ್ರಸಾದ್ ಪಟ್ಟಿಯಲ್ಲಿ: ಕಳೆದ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಮಾಡಿದ ತಪ್ಪನ್ನು ಮತ್ತೆ ಮಾಡದಿರಲು ನಿರ್ಧರಿಸಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರ ಉತ್ತರ ಕನ್ನಡ ಕ್ಷೇತ್ರದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ.
ಇಲ್ಲಿ ಸಚಿವ ದೇಶಪಾಂಡೆ ಪುತ್ರ ಹಾಗೂ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ ಅವರ ಪುತ್ರ ಟಿಕೆಟ್ ಆಕಾಂಕ್ಷಿಗಳು. ನಾಲ್ಕೈದು ಕ್ಷೇತ್ರಗಳಲ್ಲಿ ಯುವಕರಿಗೆ ಹಾಗೂ ಮೂರ್ನಾಲ್ಕು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ಮೂರ್ನಾಲ್ಕು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಾಲಿಗೆ ಕರ್ನಾಟಕ ಅತ್ಯಂತ ಪ್ರಮುಖ ರಾಜ್ಯ. ಕರ್ನಾಟಕದಿಂದ ಕನಿಷ್ಠ 18ರಿಂದ 20 ಸ್ಥಾನಗಳನ್ನಾದರೂ ಗೆಲ್ಲಲೇಬೇಕು. ಆ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಅವರಿಗೆ ಸೂಚಿಸಲಾಗಿದೆ.
ಸಭೆಯಲ್ಲಿ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅಲೆ ಮತ್ತು ಆಮ್ ಆದ್ಮಿ ಪಕ್ಷದಿಂದ ಕಾಂಗ್ರೆಸ್ ಮೇಲಾಗಬಹುದಾದ ಪ್ರತಿಕೂಲ ಪರಿಣಾಮಗಳು ಮತ್ತು ಅದನ್ನೆದುರಿಸುವ ಕಾರ್ಯತಂತ್ರಗಳ ಬಗ್ಗೆಯೂ ಚರ್ಚಿಸಲಾಗಿದೆ. ಅಭ್ಯರ್ಥಿಗಳ ಘೋಷಣೆ ನಂತರ ಮತ್ತೊಂದು ಸುತ್ತಿನ ಸಭೆ ಸೇರಿ ಕಾರ್ಯತಂತ್ರ ರೂಪಿಸಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.