ಕಸಾಪ ಶತಮಾನೋತ್ಸವಕ್ಕೆ ಸ್ಮಾರಕಭವನ ಕೊಡುಗೆ
ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ನೆನಪಿಗಾಗಿ ಸ್ಮಾರಕ ಭವನ ನಿರ್ಮಾಣ ಮತ್ತು ಸಾಹಿತ್ಯ ಚಟುವಟಿಕೆಗಳನ್ನು ಆಯೋಜಿಸಲು 5 ಕೋಟಿಯ ಕೊಡುಗೆ ಲಭಿಸಿದೆ. ಮಕ್ಕಳಿಂದ ದೂರವಾಗಿ ವೃದ್ಧಾಶ್ರಮದಲ್ಲಿರುವವರಿಗಾಗಿ ಕಾಳಜಿ ತೋರಿರುವ ಸರ್ಕಾರ, ಅವರಿಗಾಗಿ ಹಿರಿಯ ಕಲಾವಿದರಿಂದ ಕಾವ್ಯ, ವಾಚನ, ಗಮಕ, ಹರಿಕಥೆ, ಶಾಸ್ತ್ರೀಯ ಸಂಗೀತ ಮತ್ತು ಜಾನಪದ ರಂಗ ರೂಪಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು 1.5ಕೋಟಿ ನೀಡಲಿದೆ. ಜನರಲ್ಲಿ ಸಾಹಿತ್ಯದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುವ ಸಲುವಾಗಿ ರಾಜ್ಯದಲ್ಲಿರುವ ಎಲ್ಲ ಅಕಾಡೆಮಿಗಳು ಮುದ್ರಿಸುವ ಪುಸ್ತಕಗಳು ಒಂದೇ ಸೂರಿನಡಿ ದೊರಕುವಂತೆ ಮಾಡಲು ಎಲ್ಲ ಜಿಲ್ಲಾ ರಂಗಮಂದಿರ ಹಾಗೂ ಸಾಂಸ್ಕೃತಿಕ ಸಮುಚ್ಛಯಗಳಲ್ಲಿ ಪುಸ್ತಕ ಮಳಿಗೆಯನ್ನು ಪ್ರಾರಂಭಿಸಲು 1ಕೋಟಿ ಒದಗಿಸುವ ಭರವಸೆ ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 2014- 15ರ ಆರ್ಥಿಕ ವರ್ಷಕ್ಕೆ ಈ ಬಾರಿ 295 ಕೋಟಿ ಬಜೆಟ್ನಲ್ಲಿ ದೊರಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

