ಪ್ರಧಾನ ಸುದ್ದಿ

ವಿದ್ಯಾರ್ಥಿಗಳಿಗೂ ಮಂಚ!

Published On :

ಶಾದಿಭಾಗ್ಯದಲ್ಲಿ ಮಂಚಕೊಡಲು ಹೊರಟಿದ್ದ ಸಿದ್ದರಾಮಯ್ಯ ಅವರು ಈಗ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಂಚಭಾಗ್ಯ ಕರುಣಿಸಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮಲಗಲು ಮಂಚ, ಬಿಸಿನೀರು ಸ್ನಾನಕ್ಕೆ ಸೋಲಾರ್ ವಾಟರ್ ಹೀಟರ್, ಉತ್ತಮ ಆಹಾರಕ್ಕೆ ಸ್ಟೀಂ ಕುಕ್ಕಿಂಗ್, ಜ್ಞಾನಾರ್ಜನೆಗೆ ಗ್ರಂಥಾಲಯ, ಕಂಪ್ಯೂಟರ್‌ಗಳನ್ನು ವಿದ್ಯಾರ್ಥಿ ನಿಲಯದಲ್ಲೇ ಒದಗಿಸಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲ, ಈ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳು ಬೆಚ್ಚಗೆ ಮಲಗಲು ಮೂರು ವರ್ಷಕ್ಕೊಮ್ಮೆ ಜಮಖಾನ ಮತ್ತು ಹೊದಿಕೆಯನ್ನೂ ಒದಗಿಸಲು ಬಜೆಟ್‌ನಲ್ಲಿ ಘೋಷಿಸಿದ್ದು, ಇದಕ್ಕಾಗಿ 35 ಕೋಟಿ ಮೀಸಲಿಟ್ಟಿದ್ದಾರೆ.

ಭೂರಿ ಭೋಜನ
ಭೋಜನ ಹೊಟ್ಟೆ ತುಂಬಿದರಷ್ಟೇ ಚೆನ್ನ. ಅರ್ಧಂಬರ್ಧ ಆದರೆ, ತಿಂದದ್ದೂ ಇಲ್ಲ ಅನ್ನೋದೇ ಲೇಸು. ಅದಕ್ಕೇ ಹೊಟ್ಟೆತುಂಬ ಗುಣಮಟ್ಟದ ಭೋಜನ ಹಾಕುವ ಉದ್ದೇಶದಿಂದ ಸರ್ಕಾರಿ ಆಶ್ರಮ ಶಾಲೆ ಮತ್ತು ಪ್ರಾಥಮಿಕ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರತಿ ತಿಂಗಳ ಭೋಜನ ವೆಚ್ಚವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 100 ಹೆಚ್ಚಿಸಿದ್ದಾರೆ. ಮೆಟ್ರಿಕ್ ಪೂರ್ವ 800 ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು 1000ಕ್ಕೆ  ನಿಗದಿ ಮಾಡಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ/ಪದವಿ ಪೂರ್ವ ಕಾಲೇಜು ವಸತಿ ನಿಲಯದ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು 1000ದಿಂದ 1100ಕ್ಕೆ ಹೆಚ್ಚಿಸಿದ್ದಾರೆ. ಅನುದಾನಿತ ಖಾಸಗಿ ವಿದ್ಯಾರ್ಥಿ ನಿಲಯಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು 500ರಿಂದ 700ಕ್ಕೆ ಹಾಗೂ ಮೆಟ್ರಿಕ್‌ನಂತರದ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು 600ರಿಂದ 800 ಕ್ಕೇರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.