ಪ್ರಧಾನ ಸುದ್ದಿ

ತೇಜ್ಪಾಲ್ ವಿರುದ್ಧ ಚಾರ್ಜ್‌ಶೀಟ್

ತೇಜ್ಪಾಲ್ ವಿರುದ್ಧ ಚಾರ್ಜ್‌ಶೀಟ್
Published On :

ಪಣಜಿ: ತೆಹೆಲ್ಕಾ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ವಿರುದ್ಧ ಗೋವಾ ಪೊಲೀಸರು ಸೋಮವಾರ ಆರೋಪಪಟ್ಟಿ ಸಲ್ಲಿಸಿದ್ದಾರೆ. ಅತ್ಯಾಚಾರ, ಲೈಂಗಿಕ ಕಿರುಕುಳ, ಮಹಿಳೆಯ ಗೌರವಕ್ಕೆ ಧಕ್ಕೆ ಆರೋಪಗಳನ್ನು ತೇಜ್ಪಾಲ್ ವಿರುದ್ಧ ಹೊರಿಸಲಾಗಿದೆ.
 ಗೋವಾ ಪೊಲೀಸರು 2,684 ಪುಟಗಳ ಆರೋಪಪಟ್ಟಿಯನ್ನು ಚೀಫ್ ಜ್ಯುಡೀಷಿಯಲ್ ಮ್ಯಾಜಿಸ್ಟ್ರೇಟ್ ಅನುಜಾ ಪ್ರಭುದೇಸಾಯಿ ಅವರಿಗೆ ಸಲ್ಲಿಸಿದ್ದಾರೆ.
ತೇಜ್ಪಾಲ್ ಅವರು ಅತ್ಯಾಚಾರ, ಲೈಂಗಿಕ ಕಿರುಕುಳ ನೀಡಿದ್ದನ್ನು ಒಪ್ಪಿಕೊಂಡಿದ್ದಕ್ಕೆ ಸಾಕಷ್ಟು ಪುರಾವೆಗಳು ದೊರೆತಿವೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.  ತೇಜ್ಪಾಲ್ ವಿರುದ್ಧದ ಆರೋಪ ಸಾಬೀತಾದರೆ ಅವರು 7 ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಾಗಬಹುದು. ಸಹೋದ್ಯೋಗಿ ಪತ್ರಕರ್ತೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತೇಜ್ಪಾಲ್‌ರನ್ನು ನ.30ರಂದು ಬಂಧಿಸಲಾಗಿತ್ತು. ಸದ್ಯ ಅವರನ್ನು ಗೋವಾದ ವಾಸ್ಕೋದಲ್ಲಿನ ಸಬ್‌ಜೈಲಿನಲ್ಲಿ ಇರಿಸಲಾಗಿದೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.