ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಸವಲತ್ತಿಗೆ ಕತ್ತರಿ ಸುತ್ತೋಲೆ ವಾಪಸ್
ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ: ಮುಷ್ಕರದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳಿಗೆ ಕತ್ತರಿ ಹಾಕುವ ಸುತ್ತೋಲೆಯನ್ನು ಹಿಂದಕ್ಕೆ ಪಡೆಯಲು ಸರ್ಕಾರ ನಿರ್ಧರಿಸಿದೆ. ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರು, ಅಂಥ ಸುತ್ತೋಲೆ ಹೊರಬಿದ್ದಿದ್ದರೆ ಅದನ್ನು ಹಿಂದಕ್ಕೆ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜನವಿರೋಧಿ ಸುತ್ತೋಲೆಯನ್ನು ಕಾಂಗ್ರೆಸ್ ಹೊರಡಿಸುವುದಿಲ್ಲ. ಅಂಥದ್ದೊಂದು ಸುತ್ತೋಲೆ ಹೊರಡಿಸಿಲ್ಲ ಎಂದು ವಾದಿಸಿದರೂ, ನಂತರ ಅಂಥ ಸುತ್ತೋಲೆ ಹೊರಬಿದ್ದಿದ್ದರೆ ವಾಪಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಹೊರಡಿಸಿರುವ ಈ ಸುತ್ತೋಲೆಯಲ್ಲಿ ಬಿಸಿಎಂ ವಿದ್ಯಾರ್ಥಿಗಳು ಮುಷ್ಕರದಲ್ಲಿ ಪಾಲ್ಗೊಂಡರೆ ಕಾಲೇಜು ಪ್ರವೇಶದ ಸಂದರ್ಭದಲ್ಲಿ ಭರಿಸಿದ್ದ ಶುಲ್ಕ ಮರುಪಾವತಿ ಮಾಡಬಾರದು ಎಂದು ತಿಳಿಸಲಾಗಿತ್ತು. ಜತೆಗೆ ಸೌಲಭ್ಯ ಪಡೆಯಲು ನಿಗದಿ ಪಡಿಸಿದಷ್ಟು ಅಂಕ ಪಡೆಯಬೇಕೆಂಬ ಷರತ್ತನ್ನು ವಿಧಿಸಿ, ಆಧಾರ್ ಕಾರ್ಡ್ ಕಡ್ಡಾಯ ಎಂದು ಸುತ್ತೋಲೆಯಲ್ಲಿ ತಿಳಿಸಿತ್ತು. ಮುಷ್ಕರದಲ್ಲಿ ವಿದ್ಯಾರ್ಥಿ ಪಾಲ್ಗೊಂಡರೆ ಯಾವ ಸೌಲಭ್ಯ ನೀಡಬಾರದು. ಮುಷ್ಕರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಯಿಂದ ಅರ್ಜಿಯನ್ನೇ ಪಡೆಯಬಾರದು. ಒಂದು ವೇಳೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದಿದ್ದರೆ ಅದನ್ನು ರದ್ದು ಪಡಿಸಬೇಕು ಎಂದು ಸೂಚಿಸಲಾಗಿತ್ತು. ಈ ಬಗ್ಗೆ 'ಕನ್ನಡಪ್ರಭ' ಫೆ.18ರ ಸಂಚಿಕೆಯಲ್ಲಿ ವರದಿ ಪ್ರಕಟಿಸಿತ್ತು. ನಂತರ ರಾಜ್ಯಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಸುತ್ತೋಲೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. ವಿಧಾನ ಪರಿಷತ್ ಕಲಾಪದ ವೇಳೆ ಈ ವಿಷಯ ಪ್ರಸ್ತಾಪವಾಗಿತ್ತು.
ವಿದ್ಯಾರ್ಥಿಗಳು ಹೋರಾಟ ಮಾಡಬೇಕು ಎಂದು ಸಮರ್ಥಿಸಿದ ಸಚಿವ ಆಂಜನೇಯ, ಆದರೆ, ವಿದ್ಯಾರ್ಥಿಗಳು ಜನಪರ ಹೋರಾಟ ಮಾಡಬೇಕು, ರಾಜಕಾರಣಿಗಳು ವಿದ್ಯಾರ್ಥಿಗಳನ್ನು ತಮ್ಮ ದಾಳವನ್ನಾಗಸಿ ಬಳಸಿಕೊಳ್ಳುತ್ತಾರೆ. ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದರು. ಜನವಿರೋಧಿ ಸುತ್ತೋಲೆಗಳನ್ನು ಕಾಂಗ್ರೆಸ್ ಸರ್ಕಾರ ಹೊರಡಿಸುವುದಿಲ್ಲ. ವಿದ್ಯಾರ್ಥಿಗಳು ಇಂಥದ್ದಕ್ಕೆಲ್ಲ ಕಿವಿಗೊಡಬಾರದು. ಒಳ್ಳೆಯ ಉದ್ದೇಶಕ್ಕೆ ಹೋರಾಟ ಮಾಡಬೇಕು. ಹಿಂದೆ ಊಟದ ದರ ಪರಿಷ್ಕರಣೆ ಆದಾಗ ವಿದ್ಯಾರ್ಥಿಗಳು ಹೋರಾಟ ಮಾಡಿದ್ದರು. ಅವರ ಬೇಡಿಕೆ ಈಡೇರಿಸಿದ್ದೇವು. ಜನಪರ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ. ವಿದ್ಯಾರ್ಥಿಗಳಿಗೂ ಇದೆ. ಅಂಥ ಸುತ್ತೋಲೆ ಹೊರಡಿಸಿದ್ದರೆ ವಾಪಸ್ ತೆಗೆದುಕೊಳ್ಳುತ್ತೇವೆ ಎಂದರು. ಬರುವ ಲೋಕಸಭಾ ಚನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

