ಪ್ರಧಾನ ಸುದ್ದಿ

ಏಳು ಗಂಟೆ ಹೆದ್ದಾರಿ ತಡೆದು ರೈತರ ಪ್ರತಿಭಟನೆ

Published On :

ಬ್ಯಾಡಗಿ: ಕಳಪೆ ಬಿಟಿ ಹತ್ತಿ ಬೀಜಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕವು ಶುಕ್ರವಾರ ತಾಲೂಕಿನ ಮೋಟೆಬೆನ್ನೂರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸತತ 7 ಗಂಟೆಗಳ ಕಾಲ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿತು. ಇದೇ ವೇಳೆ ರೈತರ ಬೃಹತ್ ಪ್ರತಿಭಟನೆಗೆ ಸರ್ಕಾರವು ಕಳಪೆ ಬೀಜದ ಪರಿಹಾರವನ್ನು ಪ್ರತಿ ಹೆಕ್ಟೇರ್‌ಗೆ ರು. 6000ಕ್ಕೆ ಹೆಚ್ಚಿಸಿದ್ದಲ್ಲದೇ, ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಲು ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆದ್ದಾರಿ ತಡೆಯನ್ನು ಹಿಂದಕ್ಕೆ ಪಡೆಯಲಾಯಿತು. ಹಾವೇರಿ ಜಿಲ್ಲೆಯ 7 ತಾಲೂಕು ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ವಾಹನಗಳಲ್ಲಿ ಹೆದ್ದಾರಿ ಬಳಿ ಜಮಾಯಿಸಿದ್ದ ಸಾವಿರಾರು ರೈತರು ಹೆದ್ದಾರಿ ಮಧ್ಯದಲ್ಲಿಯೇ ವೇದಿಕೆ ನಿರ್ಮಿಸಿ, ರಸ್ತೆ ಮಧ್ಯದಲ್ಲಿ ಕುಳಿತು ಸುಮಾರು 7 ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಘಟಕವೂ ಪ್ರತಿಭಟನೆಗೆ ಕೈಜೋಡಿಸಿದ ಹಿನ್ನೆಲೆಯಲ್ಲಿ ರೈತ ಮುಖಂಡರ ದಂಡೇ ಅಲ್ಲಿ ನೆರೆದಿತ್ತು. ಸುಡು ಬಿಸಿಲನ್ನು ಲೆಕ್ಕಿಸದೇ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ರೈತರು ರಸ್ತೆ ಮೇಲೆಯೇ ಕುಳಿತು ಧರಣಿ ನಡೆಸಿದರು. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಾವಿರಾರು ಲಾರಿಗಳು ಸಾಲುಗಟ್ಟಿ ನಿಂತಿದ್ದವು. ಕೆಲ ವಾಹನಗಳು ಮಾರ್ಗ ಬದಲಿಸಿ ಚಲಿಸಿದರೆ, ಇನ್ನೂ ಕೆಲ ಬೃಹತ್ ಲಾರಿಗಳು ರಸ್ತೆ ಬಿಟ್ಟು ಕದಲಲಿಲ್ಲ. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ಕಡೆಗೆ ಸಂಚರಿಸುವ ವಾಹನಗಳನ್ನು ಮಾರ್ಗ ಬದಲಿಸಿ ಹಲಗೇರಿ, ಲಿಂಗದೇವರಕೊಪ್ಪ, ಮತ್ತೂರು, ಕಾಗಿನೆಲೆ ಮಾರ್ಗವಾಗಿ ಹಾವೇರಿಗೆ ಸೇರುವಂತೆ ನೋಡಿಕೊಳ್ಳಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.