ಪ್ರಧಾನ ಸುದ್ದಿ

ಇಂದು ಹುಬ್ಬಳ್ಳಿಗೆ ನರೇಂದ್ರ ಮೋದಿ; ಲಕ್ಷಾಂತರ ಜನರ ನಿರೀಕ್ಷೆ

Published On :

ಹುಬ್ಬಳ್ಳಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ 'ಭಾರತ ಗೆಲ್ಲಿಸಿ' ರ್ಯಾಲಿಗೆ ಕ್ಷಣಗಣನೆ ಆರಂಭಗೊಡಿದೆ.  ಹುಬ್ಬಳ್ಳಿ ಕುಸುಗಲ್ ರಸ್ತೆಯ ಆಕ್ಸ್‌ಫರ್ಡ್ ಕಾಲೇಜಿನ ಪಕ್ಕದ ಮೈದಾನದಲ್ಲಿ ಫೆ. 28ರಂದು ಮಧ್ಯಾಹ್ನ 4ಕ್ಕೆ ನಡೆಯಲಿರುವ 'ಭಾರತ ಗೆಲ್ಲಿಸಿ' ರ್ಯಾಲಿಯ ಸಿದ್ಧತೆಗಳು ಪೂರ್ಣಗೊಂಡಿವೆ.  ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆಗೊಂಡ ನಂತರ ಇದೇ ಪ್ರಥಮ ಬಾರಿಗೆ ಹುಬ್ಬಳ್ಳಿಯಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿರುವ ನರೇಂದ್ರ ಮೋದಿ ಭಾಷಣ ಕೇಳಲು ಧಾರವಾಡ ಜಿಲ್ಲೆಯ ಜೊತೆಗೆ ಹಾವೇರಿ, ಗದಗ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ವಾಹನಗಳಲ್ಲಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.
ನರೇಂದ್ರ ಮೋದಿ ಅವರ 'ಭಾರತ ಗೆಲ್ಲಿಸಿ' ರ್ಯಾಲಿಗಾಗಿ ಒಟ್ಟು 60 ಎಕರೆ ಪ್ರದೇಶದ ಮೈದಾನ ಸಿದ್ಧಗೊಂಡಿದೆ. ಸುಮಾರು 1.5 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು 10 ಸಾವಿರ ಕಾರ್, ಬಸ್ ಮತ್ತಿತರ ವಾಹನ ಹಾಗೂ 10 ಸಾವಿರ ಬೈಕ್‌ಗಳಿಗಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿಯೂ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಆಟೋ ಹಾಗೂ ಮತ್ತಿತರ ವಾಹನಗಳಲ್ಲಿ ಕಳೆದ ಒಂದು ವಾರದಿಂದ ಪ್ರಚಾರ ಮಾಡಲಾಗುತ್ತಿದೆ.  ದೂರದೂರಿನ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಬೆಳಗ್ಗೆಯೇ ಬಸ್ ಹಾಗೂ ಮತ್ತಿತರ ವಾಹನಗಳಲ್ಲಿ ಹೊರಟಿದ್ದು, ರ್ಯಾಲಿ ಪ್ರಾರಂಭಗೊಳ್ಳುವ ಸಮಯದೊಳಗೆ ಹುಬ್ಬಳ್ಳಿ ತಲುಪಲಿದ್ದಾರೆ. ಅವಳಿ ನಗರದ ಪ್ರಮುಖ ಬಡಾವಣೆಗಳಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೆರವಣಿಗೆ ನಡೆಸುತ್ತಿದ್ದು, ಮೆರವಣಿಗೆ ಮೂಲಕವೇ ರ್ಯಾಲಿ ಸ್ಥಳ ತಲುಪಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.