ಹೊಸ ವರ್ಷಾಚರಣೆಗೆ ದುರಂತದ ಸ್ವಾಗತ: ಆರು ಜನರ ಸಾವು
ಮಂಡ್ಯ/ಮಳವಳ್ಳಿ/ಚಿಕ್ಕನಾಯಕನಹಳ್ಳಿ/ತುಮಕೂರು: ಹೊಸ ವರ್ಷದ ಆಗಮನವನ್ನು ಸಂಭ್ರಮದಿಂದಲೇ ಬರ ಮಾಡಿಕೊಂಡ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಮಂಡ್ಯದಲ್ಲಿ ನಡೆದರೆ, ಮಳವಳ್ಳಿ ಹಾಗೂ ತುಮಕೂರಿನಲ್ಲಿ ತಲಾ ಇಬ್ಬರು, ಚಿಕ್ಕನಾಯಕನಹಳ್ಳಿಯಲ್ಲಿ ಒಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬಾರ್ವೊಂದರಲ್ಲಿ ಹೊಸ ವರ್ಷದ ಸಂಭ್ರಮವನ್ನು ಆಚರಿಸಿಕೊಂಡ ಇಬ್ಬರು ಸ್ನೇಹಿತರು ಹಾಗೂ ಅವರ ಗೆಳೆಯರ ಗುಂಪಿನ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿತ್ತು. ಪೊಲೀಸರ ಮಧ್ಯ ಪ್ರವೇಶದಿಂದ ಗಲಾಟೆ ತಣ್ಣಗಾಗಿತ್ತು. ಆದರೂ ಗ್ಯಾಸ್ ನಾಗೇಶ್ ಎಂಬವರು ವೆಂಕಟೇಶ್ ಎಂಬವರ ಮನೆಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯಿಂದ ಗಾಯಗೊಂಡಿದ್ದ ವೆಂಕಟೇಶ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಪಶ್ಚಿಮ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಅಪಘಾತದಲ್ಲಿ ಐದು ಸಾವು: ಬೆಂಗಳೂರು ಕಡೆಯಿಂದ ವರ್ಷಾಚರಣೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ಕಾರಿಗೆ ಮಳವಳ್ಳಿ ಕಡೆಯಿಂದ ಬಾಳೆಗೊನೆ ತುಂಬಿಕೊಂಡು ಹೋಗುತ್ತಿದ್ದ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನಾಯತ್ (47) ಹಾಗೂ ಮುಸ್ತಾಫ್ (45) ಅಸುನೀಗಿದವರು. ತುಮಕೂರಿನ ರಾಷ್ಟ್ರೀಯ ಹೆದ್ದಾರಿ 4ರ ಹಿರೇಹಳ್ಳಿಯಲ್ಲಿ ಹೊಸ ವರ್ಷದ ಸಂಭ್ರಮ ಮುಗಿಸಿಕೊಂಡು ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ರಾಜೇಶ್ (32) ಹಾಗೂ ವಿಜಯೇಂದ್ರ (30) ಎಂಬವರು ಮೃತಪಟ್ಟಿದ್ದಾರೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರನ್ನು ಚಲಿಸುತ್ತಿದ್ದ ಗೋಪಿ (33) ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

