ಗೋವಾದಲ್ಲಿ ಕಟ್ಟಡ ಕುಸಿತ: 14 ಸಾವು
ಪಣಜಿ: ಇಲ್ಲಿಂದ ಸುಮಾರು 70 ಕಿ.ಮೀ. ದೂರದ ದಕ್ಷಿಣ ಗೋವಾದ ಕಾಣಕೋಣದಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ವಸತಿ ಸಂಕೀರ್ಣ ಕಟ್ಟಡವೊಂದು ಶನಿವಾರ ಮಧ್ಯಾಹ್ನ ಸಂಪೂರ್ಣ ಕುಸಿದು ಬಿದ್ದು 14 ಕಾರ್ಮಿಕರು ಮೃತಪಟ್ಟಿದ್ದಾರೆ.
ಶನಿವಾರ ಮಧ್ಯಾಹ್ನ ಸುಮಾರು 2 ಗಂಟೆ ಹೊತ್ತಿಗೆ ಕಟ್ಟಡ ಒಂದು ಕಡೆ ಸಂಪೂರ್ಣವಾಗಿ ವಾಲಿ ಕುಸಿದು ಬಿದ್ದಿದ್ದು, ಆ ಸಂದರ್ಭದಲ್ಲಿ ಕಟ್ಟಡದಲ್ಲಿ ಸುಮಾರು 50 ಕಾರ್ಮಿಕರಿದ್ದರು ಎನ್ನಲಾಗಿದೆ. 23 ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಅವರಲ್ಲಿ 13 ಜನರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳಡಿಯಲ್ಲಿ ಇನ್ನೂ ಸುಮಾರು 10 ಕಾರ್ಮಿಕರು ಸಿಕ್ಕಿದ್ದಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ದೆಹಲಿ ಮೂಲದ ರೂಬಿ ಡೆವಲಪರ್ಸ್ ಈ ಕಟ್ಟಡದ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಂಡಿತ್ತು. ಶನಿವಾರ ಮಧ್ಯಾಹ್ನ ಊಟಕ್ಕಾಗಿ ಕೆಲಸ ನಿಲ್ಲಿಸಿದ್ದ ಕಾರ್ಮಿಕರೆಲ್ಲ ಕೆಳ ಅಂತಸ್ತಿನಲ್ಲಿ ಊಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ನಿರ್ಮಾಣದ ಹಂತದಲ್ಲಿದ್ದ ಈ ಕಟ್ಟಡ ಕುಸಿದು ಅವರ ಮೇಲೆ ಬಿದ್ದಿದೆ. ಇದರಿಂದ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ.
ಕಾರ್ಮಿಕರಲ್ಲಿ ಹೆಚ್ಚಿನವರು ಸ್ಥಳೀಯ ಕೋಚೆಗಾಂವ, ಹಾಗೂ ಗಾಂವದೊಂಗಡಿ ಗ್ರಾಮದವರಾಗಿದ್ದಾರೆ. ಓಡಿಸ್ಸಾ ಮೂಲದ ಕೆಲ ಕಾರ್ಮಿಕರೂ ಇದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉತ್ತರ ಕರ್ನಾಟಕ ಭಾಗದ ಕೆಲವರು ಇರಬಹುದೆಂಬ ಶಂಕೆ ಇದ್ದರೂ ಖಚಿತ ಪಟ್ಟಿಲ್ಲ. ಈ ಬೃಹತ್ ಕಟ್ಟಡ ಕುಸಿಯಲು ಕಳಪೆ ಕಾಮಗಾರಿ ಮತ್ತು ಉಸುಕನ್ನು ಕಡಿಮೆ ಪ್ರಮಾಣದಲ್ಲಿ ಬಳಸಿದ್ದೇ ಕಾರಣ ಎನ್ನಲಾಗಿದೆ.
ಮುಖ್ಯಮಂತ್ರಿ ಭೇಟಿ; ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಮನೋಹರ ಪರೀಕರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಕಾಣಕೋಣ ಕ್ಷೇತ್ರದ ಶಾಸಕ, ಕ್ರೀಡಾ ಸಚಿವರೂ ಆದ ರಮೇಶ ತವಡಕರ ಅವರೂ ಸ್ಥಳಕ್ಕೆ ಭೇಟಿ ನೀಡಿ ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸುವ ಹಾಗೂ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡುವ ಕಾರ್ಯದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಈ ಕುರಿತಂತೆ ಕಾಣಕೋಣ ಪೊಲೀಸ್ ಠಾಣೆಂುಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖಾ ಕಾಂರ್ುವನ್ನು ಚುರುಕುಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

