ಅನಂತಮೂರ್ತಿಗೆ ಬಸವ ಪುರಸ್ಕಾರ

ಬೆಂಗಳೂರು: ರಾಜ್ಯ ಸರ್ಕಾರದ ಪ್ರತಿಷ್ಠಿತ ಬಸವ ಪ್ರಶಸ್ತಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು.ಆರ್. ಅನಂತಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿಯ ಜಿ.ಬಿ. ಹಂಸಾನಂದಾಚಾರ್ಯ ಅವರನ್ನು ಜಕಣಾಚಾರಿ ಪ್ರಶಸ್ತಿ, ಧಾರವಾಡದ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಅವರನ್ನು ಗುಬ್ಬಿ ವೀರಣ್ಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ರು. 10 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ: ರಾಜ್ಯ ಸರ್ಕಾರದ 2012ನೇ ಸಾಲಿನ ಬಸವ ಪ್ರಶಸ್ತಿಗೆ ಡಾ. ಯು.ಆರ್. ಅನಂತಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿ 10 ಲಕ್ಷ ನಗದು ಹಾಗೂ ಸ್ಮರಣಿಕೆ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಬಸವ ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲು ರಂಜಾನ್ ದರ್ಗಾ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದರು. 2012ನೇ ಸಾಲಿನ ಜಕಣಾಚಾರಿ ಪ್ರಶಸ್ತಿಗೆ ಶಿಲ್ಪ, ಕಾಷ್ಠ ಹಾಗೂ ಲೋಹ ಶಿಲ್ಪಗಳಲ್ಲಿ ಪರಿಣತಿ ಹೊಂದಿರುವ ಬಳ್ಳಾರಿಯ ಜಿ.ಬಿ. ಹಂಸಾನಂದಚಾರ್ಯ ಅವರನ್ನು ಕನಕಮೂರ್ತಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಈ ಪ್ರಶಸ್ತಿಯು ರು. 3 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕ ಒಳಗೊಂಡಿದೆ. ಧಾರವಾಡದ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಅವರನ್ನು 2012ನೇ ಸಾಲಿನ ಗುಬ್ಬಿವೀರಣ್ಣ ಪ್ರಶಸ್ತಿಗೆ ಎಲ್.ಬಿ.ಕೆ. ಆಲ್ದಾಳ್ ಅಧ್ಯಕ್ಷತೆಯ ಆಯ್ಕೆ ಸಮಿತಿ ಒಮ್ಮತದಿಂದ ಆಯ್ಕೆ ಮಾಡಿದೆ. ಈ ಪ್ರಶಸ್ತಿ ರು. 3 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕ ಒಳಗೊಂಡಿದೆ. ಈ ಮೂರು ಪ್ರಶಸ್ತಿಗಳ ಪ್ರದಾನ ಸಮಾರಂಭದ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಉಮಾಶ್ರೀ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


